ಏಕೆಂದರೆ ಪಂಜಾಬ್ ಕಿಂಗ್ಸ್ ಮೊಹಾಲಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಇಲ್ಲಿ ಆಡಿರುವ 2 ಪಂದ್ಯಗಳಲ್ಲಿ 1 ರಲ್ಲಿ ಜಯ ಸಾಧಿಸಿದೆ, ಮತ್ತೊಂದು ಪಂದ್ಯದಲ್ಲಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತು. ಹಾಗೆಯೇ ಎದುರಾಳಿಗಳ ತವರಿನಲ್ಲಿ ನಡೆದ 3 ಪಂದ್ಯಗಳಲ್ಲಿ 2 ರಲ್ಲಿ ಜಯ ಸಾಧಿಸಿದೆ. ಇದೇ ಆತ್ಮ ವಿಶ್ವಾಸದೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ತವರಿನಲ್ಲಿ ಕಣಕ್ಕಿಳಿಯಲಿದೆ.