IPL 2023: RCB ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಬ್ಯಾಟ್ಸ್​ಮನ್ ಐಪಿಎಲ್​ನಿಂದ ಔಟ್

| Updated By: ಝಾಹಿರ್ ಯೂಸುಫ್

Updated on: Apr 04, 2023 | 4:22 PM

Rajat Patidar IPL 2023: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್.

1 / 8
IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿ (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

2 / 8
ಹೌದು, ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು.

3 / 8
ಆದರೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ಎನ್‌ಸಿಎ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಪಾಟಿದಾರ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

4 / 8
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್​ ಬಾರಿಸಿದ್ದರು. ಅಲ್ಲದೆ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಇದೀಗ ಪ್ರಮುಖ ಆಟಗಾರ ಹೊರಗುಳಿಯುತ್ತಿರುವುದು ಆರ್​ಸಿಬಿ ತಂಡಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ.

5 / 8
ಏಕೆಂದರೆ ಈಗಾಗಲೇ ಮೊಣಕಾಲಿನ ನೋವಿನಿಂದ ಬಳಲುತ್ತಿರುವ ಜೋಶ್ ಹ್ಯಾಝಲ್​ವುಡ್ ಐಪಿಎಲ್​​ನ ಮೊದಲಾರ್ಧದರಿಂದ ಹೊರಗುಳಿದಿದ್ದಾರೆ.

6 / 8
ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿರುವ ಶ್ರೀಲಂಕಾದ ವನಿಂದು ಹಸರಂಗ ಕೂಡ ಆರ್​ಸಿಬಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

7 / 8
ಇದರ ನಡುವೆ ರಜತ್ ಪಾಟಿದಾರ್ ಕೂಡ ಆರ್​ಸಿಬಿ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಬಹುದು. ಏಕೆಂದರೆ ಈ ಮೂವರು ಆಟಗಾರರು ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರು. ಹೀಗಾಗಿ ಪ್ರಮುಖ ಆಟಗಾರರ ಅಲಭ್ಯತೆಯು ಆರ್​ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳಿಗೆ ಮುಳುವಾಗಬಹುದು.

8 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

Published On - 4:18 pm, Tue, 4 April 23