IPL 2023: RCB ಪರ ಕನ್ನಡಿಗ ಪಾದಾರ್ಪಣೆ

Edited By:

Updated on: Apr 15, 2023 | 3:42 PM

IPL 2023 RCB vs DC: ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಲಿದೆ.

1 / 7
IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದದ ಮೂಲಕ ಕನ್ನಡಿಗ ವೈಶಾಖ್ ವಿಜಯಕುಮಾರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದಾರೆ.

IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದದ ಮೂಲಕ ಕನ್ನಡಿಗ ವೈಶಾಖ್ ವಿಜಯಕುಮಾರ್ ಐಪಿಎಲ್​ಗೆ ಪಾದಾರ್ಪಣೆ ಮಾಡಿದ್ದಾರೆ.

2 / 7

ಈ ಬಾರಿಯ ಆರ್​ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್​ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

3 / 7

ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

4 / 7

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

5 / 7

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಆರ್​ಸಿಬಿ ತಂಡವು ಮೊದಲು ಬ್ಯಾಟ್ ಮಾಡಲಿದೆ.

6 / 7

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಯಶ್ ಧುಲ್, ಮನೀಶ್ ಪಾಂಡೆ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಲಲಿತ್ ಯಾದವ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಮುಸ್ತಾಫಿಜುರ್ ರೆಹಮಾನ್

7 / 7

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್.

Published On - 3:42 pm, Sat, 15 April 23

Loading...
Unable to load recommendations.
Follow Us