- Kannada News Photo gallery Cricket photos IPL 2023: RCB's Will Jacks ruled out of series with thigh injury
IPL 2023: RCB ತಂಡದ ಯುವ ಆಟಗಾರನಿಗೆ ಗಾಯ: ಐಪಿಎಲ್ಗೆ ಡೌಟ್..?
IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್.
Updated on: Mar 05, 2023 | 11:58 PM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಆರ್ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆರ್ಸಿಬಿ ತಂಡದ ಪ್ರಮುಖ ಆಟಗಾರ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಅತ್ಯುತ್ತಮ ಸ್ಪಿನ್ ಆಲ್ರೌಂಡರ್ ಆಗಿರುವ ವಿಲ್ ಜಾಕ್ಸ್ ಈ ಬಾರಿ ಆರ್ಸಿಬಿ ತಂಡದ ಬಲಿಷ್ಠತೆಯನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಅದರಲ್ಲೂ ಸ್ಪೋಟಕ ಬ್ಯಾಟಿಂಗ್ ನಡೆಸುವ ಜಾಕ್ಸ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಮಾಡಬಲ್ಲ ಸಾಮರ್ಥ್ಯ ಹೊಂದಿದ್ದರು.

ಬಾಂಗ್ಲಾದೇಶ್ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಅವರ ಎಡತೊಡೆ ಭಾಗಕ್ಕೆ ಗಾಯವಾಗಿತ್ತು. ಈ ಗಾಯವು ಗಂಭೀರವಾಗಿರುವ ಕಾರಣ ಇದೀಗ ಐಪಿಎಲ್ನಿಂದ ಹೊರಗುಳಿಯಲು ವಿಲ್ ಜಾಕ್ಸ್ ನಿರ್ಧರಿಸಿದ್ದಾರೆ.

ಹೌದು, ಆರ್ಸಿಬಿ ತಂಡದಲ್ಲಿರುವ ಇಂಗ್ಲೆಂಡ್ನ ಯುವ ಆಲ್ರೌಂಡರ್ ವಿಲ್ ಜಾಕ್ಸ್ ಗಾಯದ ಕಾರಣ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನಡೆದ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಜಾಕ್ಸ್ ಗಾಯಗೊಂಡಿದ್ದರು.

ಏಕೆಂದರೆ ಈಗಾಗಲೇ ಗಾಯಗೊಂಡಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ವುಡ್ ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇನ್ನು ಮಾರ್ಚ್ 31 ರೊಳಗೆ ಚೇತರಿಸಿಕೊಂಡರೆ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವುದಾಗಿ ಹ್ಯಾಝಲ್ವುಡ್ ತಿಳಿಸಿದ್ದಾರೆ.

ಇದೀಗ 3.2 ಕೋಟಿ ರೂ.ಗೆ ಆರ್ಸಿಬಿ ಖರೀದಿಸಿದ ಇಂಗ್ಲೆಂಡ್ ಆಟಗಾರ ವಿಲ್ ಜಾಕ್ಸ್ ಕೂಡ ಗಾಯಗೊಂಡಿದ್ದಾರೆ. ಒಂದು ವೇಳೆ ಈ ಇಬ್ಬರು ಆಟಗಾರರು ಐಪಿಎಲ್ನಿಂದ ಹೊರಗುಳಿದರೆ ಆರ್ಸಿಬಿ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ.

ಹೀಗಾಗಿಯೇ ಆರ್ಸಿಬಿ ಇಂಗ್ಲೆಂಡ್ ಆಲ್ರೌಂಡರ್ನನ್ನು ಬರೋಬ್ಬರಿ 3.2 ಕೋಟಿ ನೀಡಿ ಖರೀದಿಸಿತ್ತು. ಇದೀಗ ಗಾಯಗೊಂಡಿರುವುದರಿಂದ ವಿಲ್ ಜಾಕ್ಸ್ ಐಪಿಎಲ್ನಿಂದ ಹೊರಗುಳಿಯುವ ನಿರ್ಧಾರ ಮಾಡಿದ್ದಾರೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.



















