ಏಪ್ರಿಲ್ 9, 2023...ಈ ದಿನವನ್ನು ಯಾರು ಮರೆತರೂ ಇಬ್ಬರು ಕ್ರಿಕೆಟಿಗರು ಮಾತ್ರ ತಮ್ಮ ಜೀವಮಾನದಲ್ಲಿ ಮರೆಯಲ್ಲ. ಅದರಲ್ಲಿ ಒಬ್ಬರು ಯಶ್ ದಯಾಳ್. ಮತ್ತೊಬ್ಬರು ರಿಂಕು ಸಿಂಗ್. ದಯಾಳ್ ಪಾಲಿಗೆ ಕಾಡುವ ಕನಸಾಗಿ ಏಪ್ರಿಲ್ ಕಾಡಿದ್ರೆ, ರಿಂಕು ಪಾಲಿಗೆ ಅವಿಸ್ಮರಣೀಯ ದಿನ. ಏಕೆಂದರೆ ಗುಜರಾತ್ ಟೈಟಾನ್ಸ್ ಹಾಗೂ ಕೆಕೆಆರ್ ನಡುವಣ ಪಂದ್ಯದಲ್ಲಿ ಯಶ್ ದಯಾಳ್ ಅವರ ಕೊನೆಯ ಓವರ್ನಲ್ಲಿ ರಿಂಕು ಸಿಂಗ್ 5 ಭರ್ಜರಿ ಸಿಕ್ಸರ್ ಸಿಡಿಸಿ ಕೆಕೆಆರ್ ತಂಡಕ್ಕೆ ಕಷ್ಟಸಾಧ್ಯದ ಗೆಲುವು ತಂದುಕೊಟ್ಟಿದ್ದರು.