IPL 2023: RCB ಬೆಂಕಿ ಬೌಲಿಂಗ್​ಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್

IPL 2023 RR vs RCB: ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು.

TV9 Web
| Updated By: ಝಾಹಿರ್ ಯೂಸುಫ್

Updated on:May 14, 2023 | 6:39 PM

IPL 2023 RR vs RCB: ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

1 / 9
ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

2 / 9
ಪವರ್​ಪ್ಲೇನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ ಆರ್​ಸಿಬಿ ಆರಂಭಿಕರು ಕಲೆಹಾಕಿದ್ದು ಕೇವಲ 42 ರನ್​ಗಳು ಮಾತ್ರ. ಇದಾದ ಬಳಿಕ 19 ಎಸೆತಗಳಲ್ಲಿ 18 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿ ಔಟಾದರು.

3 / 9
ಮತ್ತೊಂದೆಡೆ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 171 ಕ್ಕೆ ಬಂದು ನಿಂತಿತು.

4 / 9
172 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್​ಗೆ ಮೊದಲ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಬಿಗ್ ಶಾಕ್ ನೀಡಿದರು. ಪ್ರಥಮ ಓವರ್​ನ 2ನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ (0) ವಿಕೆಟ್ ಪಡೆದ ಸಿರಾಜ್ ಆರ್​ಸಿಬಿ ತಂಡಕ್ಕೆ ಆರಂಭಿಕ ಯಶಸ್ಸು ತಂದು ಕೊಟ್ಟರು.

5 / 9
ಇದರ ಬೆನ್ನಲ್ಲೇ ವೇಯ್ನ್ ಪಾರ್ನೆಲ್ ಜೋಸ್ ಬಟ್ಲರ್​ (0) ಹಾಗೂ ಸಂಜು ಸ್ಯಾಮ್ಸನ್​ (4) ಪೆವಿಲಿಯನ್ ಹಾದಿ ತೋರಿಸಿದರು. ಇನ್ನು ಬ್ರೇಸ್​ವೆಲ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕಬಳಿಸಿದರು.

6 / 9
7 ಓವರ್​ನಲ್ಲಿ ಕೇವಲ 31 ರನ್​ಗಳಿಸಿ 6 ವಿಕೆಟ್ ಕಳೆದುಕೊಂಡು ರಾಜಸ್ಥಾನ್ ರಾಯಲ್ಸ್ ಸೋಲಿನ ಸುಳಿಗೆ ಸಿಲುಕಿದರು. ಇತ್ತ ಸಂಪೂರ್ಣ ಮೇಲುಗೈ ಸಾಧಿಸಿ ಆರ್​ಸಿಬಿ ಶಿಮ್ರಾನ್ ಹೆಟ್ಮೆಯರ್ (35) ವಿಕೆಟ್ ಪಡೆಯುವ ಮೂಲಕ ಗೆಲುವನ್ನು ಖಚಿತಪಡಿಸಿದರು.

7 / 9
ಅಂತಿಮವಾಗಿ 10.3 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಆರ್​ಸಿಬಿ ತಂಡವು 112 ರನ್​ಗಳ ಭರ್ಜರಿ ಜಯ ಸಾಧಿಸಿದೆ.

8 / 9
ಆರ್​ಸಿಬಿ ಪರ ವೇಯ್ನ್ ಪಾರ್ನೆಲ್​ 3 ಓವರ್​ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರೆ, ಮೈಕೆಲ್ ಬ್ರೇಸ್​ವೆಲ್, ಕರ್ಣ್​ ಶರ್ಮಾ ತಲಾ 2 ವಿಕೆಟ್ ಹಾಗೂ ಸಿರಾಜ್, ಮ್ಯಾಕ್ಸ್​ವೆಲ್ ತಲಾ 1 ವಿಕೆಟ್ ಕಬಳಿಸಿ ಮಿಂಚಿದರು.

9 / 9

Published On - 6:23 pm, Sun, 14 May 23

Follow us
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ