IPL 2023: RCB ಬೆಂಕಿ ಬೌಲಿಂಗ್ಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್
TV9 Web | Updated By: ಝಾಹಿರ್ ಯೂಸುಫ್
Updated on:
May 14, 2023 | 6:39 PM
IPL 2023 RR vs RCB: ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು.
1 / 9
IPL 2023 RR vs RCB: ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡವು ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.
2 / 9
ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಆರ್ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.
3 / 9
ಪವರ್ಪ್ಲೇನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ ಆರ್ಸಿಬಿ ಆರಂಭಿಕರು ಕಲೆಹಾಕಿದ್ದು ಕೇವಲ 42 ರನ್ಗಳು ಮಾತ್ರ. ಇದಾದ ಬಳಿಕ 19 ಎಸೆತಗಳಲ್ಲಿ 18 ರನ್ಗಳಿಸಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿ ಔಟಾದರು.
4 / 9
ಮತ್ತೊಂದೆಡೆ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು. ಪರಿಣಾಮ ಆರ್ಸಿಬಿ ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 171 ಕ್ಕೆ ಬಂದು ನಿಂತಿತು.
5 / 9
172 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ಗೆ ಮೊದಲ ಓವರ್ನಲ್ಲೇ ಮೊಹಮ್ಮದ್ ಸಿರಾಜ್ ಬಿಗ್ ಶಾಕ್ ನೀಡಿದರು. ಪ್ರಥಮ ಓವರ್ನ 2ನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ (0) ವಿಕೆಟ್ ಪಡೆದ ಸಿರಾಜ್ ಆರ್ಸಿಬಿ ತಂಡಕ್ಕೆ ಆರಂಭಿಕ ಯಶಸ್ಸು ತಂದು ಕೊಟ್ಟರು.
6 / 9
ಇದರ ಬೆನ್ನಲ್ಲೇ ವೇಯ್ನ್ ಪಾರ್ನೆಲ್ ಜೋಸ್ ಬಟ್ಲರ್ (0) ಹಾಗೂ ಸಂಜು ಸ್ಯಾಮ್ಸನ್ (4) ಪೆವಿಲಿಯನ್ ಹಾದಿ ತೋರಿಸಿದರು. ಇನ್ನು ಬ್ರೇಸ್ವೆಲ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕಬಳಿಸಿದರು.
7 / 9
7 ಓವರ್ನಲ್ಲಿ ಕೇವಲ 31 ರನ್ಗಳಿಸಿ 6 ವಿಕೆಟ್ ಕಳೆದುಕೊಂಡು ರಾಜಸ್ಥಾನ್ ರಾಯಲ್ಸ್ ಸೋಲಿನ ಸುಳಿಗೆ ಸಿಲುಕಿದರು. ಇತ್ತ ಸಂಪೂರ್ಣ ಮೇಲುಗೈ ಸಾಧಿಸಿ ಆರ್ಸಿಬಿ ಶಿಮ್ರಾನ್ ಹೆಟ್ಮೆಯರ್ (35) ವಿಕೆಟ್ ಪಡೆಯುವ ಮೂಲಕ ಗೆಲುವನ್ನು ಖಚಿತಪಡಿಸಿದರು.
8 / 9
ಅಂತಿಮವಾಗಿ 10.3 ಓವರ್ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್ಗಳಿಗೆ ಆಲೌಟ್ ಮಾಡುವ ಮೂಲಕ ಆರ್ಸಿಬಿ ತಂಡವು 112 ರನ್ಗಳ ಭರ್ಜರಿ ಜಯ ಸಾಧಿಸಿದೆ.
9 / 9
ಆರ್ಸಿಬಿ ಪರ ವೇಯ್ನ್ ಪಾರ್ನೆಲ್ 3 ಓವರ್ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರೆ, ಮೈಕೆಲ್ ಬ್ರೇಸ್ವೆಲ್, ಕರ್ಣ್ ಶರ್ಮಾ ತಲಾ 2 ವಿಕೆಟ್ ಹಾಗೂ ಸಿರಾಜ್, ಮ್ಯಾಕ್ಸ್ವೆಲ್ ತಲಾ 1 ವಿಕೆಟ್ ಕಬಳಿಸಿ ಮಿಂಚಿದರು.
Published On - 6:23 pm, Sun, 14 May 23