IPL 2023: RCB ಪಾಲಿಗೆ ಮುಂದಿನ ಪಂದ್ಯ ಯಾಕೆ ಅಷ್ಟೊಂದು ಮುಖ್ಯ ಗೊತ್ತಾ?
IPL 2023 Kannada: ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ.
Updated on: May 12, 2023 | 10:07 PM

IPL 2023: ಐಪಿಎಲ್ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 14 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

ಏಕೆಂದರೆ ಪ್ಲೇಆಫ್ ರೇಸ್ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್ನಲ್ಲಿ ಉಳಿದುಕೊಳ್ಳಬಹುದು.

ಅದರಲ್ಲೂ ಪ್ರಸ್ತುತ ಪಾಯಿಂಟ್ಸ್ ಟೇಬಲ್ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು. ಅಲ್ಲದೆ ಸನ್ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್ ರನ್ ರೇಟ್ ಮೂಲಕ ಪ್ಲೇಆಫ್ ಹಂತಕ್ಕೇರುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

ಇಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ನೆಟ್ ರನ್ ರೇಟ್ ಟಾರ್ಗೆಟ್ನೊಂದಿಗೆ ಗೆಲ್ಲುವ ಮೂಲಕ ಆರ್ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶ ಇರಲಿದೆ. ಒಂದು ಆರ್ಆರ್ ವಿರುದ್ಧ ಆರ್ಸಿಬಿ ಸೋತರೆ ಪ್ಲೇಆಫ್ ಆಸೆ ಬಹುತೇಕ ಕಮರಲಿದೆ.

ಹೀಗಾಗಿ ಮುಂದಿನ ಪಂದ್ಯದಲ್ಲಿ ಆರ್ಸಿಬಿ ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಲೇಬೇಕು. ಅಲ್ಲದೆ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳಬೇಕು.



















