AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೊಸ ಅವತಾರದಲ್ಲಿ ಐಪಿಎಲ್​ಗೆ ಶ್ರೀಶಾಂತ್ ಕಂಬ್ಯಾಕ್

IPL 2023 Kannada: ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್, ಕೊಚ್ಚಿನ್ ಟಸ್ಕರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಒಟ್ಟು 44 ಪಂದ್ಯಗಳನ್ನಾಡಿದ್ದ ಶ್ರೀಶಾಂತ್ 40 ವಿಕೆಟ್ ಕಬಳಿಸಿ ಮಿಂಚಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on:Mar 20, 2023 | 10:36 PM

Share
ಟೀಮ್ ಇಂಡಿಯಾದ ಮಾಜಿ ವೇಗಿ ಶಾಂತಕುಮಾರನ್ ಶ್ರೀಶಾಂತ್ ತಮ್ಮ ಕ್ರಿಕೆಟ್ ಜೀವನಕ್ಕೆ ಪೂರ್ಣವಿರಾಮ ಹಾಕಿ ಕೇವಲ ಒಂದು ವರ್ಷವಾಗಿದೆಯಷ್ಟೇ. ಆದರೆ ಐಪಿಎಲ್ 2013 ರ ಸ್ಪಾಟ್ ಫಿಕ್ಸಿಂಗ್ ವಿವಾದದಲ್ಲಿ ಸಿಕ್ಕಿಹಾಕಿಕೊಂಡ ಬಳಿಕ ಮತ್ತೆ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ಶ್ರೀಶಾಂತ್ ಐಪಿಎಲ್​ಗೆ ಮರಳುತ್ತಿದ್ದಾರೆ. ಆದರೆ ಈ ಬಾರಿ ಹೊಸ ಅವತಾರದಲ್ಲಿ ಎಂಬುದಷ್ಟೇ ವ್ಯತ್ಯಾಸ.

1 / 6
ಹೌದು, ಐಪಿಎಲ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ,ಟೂರ್ನಿಯ ಅಧಿಕೃತ ಪ್ರಸಾರಕರಾಗಿರುವ ಸ್ಟಾರ್ ಸ್ಪೋರ್ಟ್ಸ್ ಪ್ಯಾನೆಲ್ ಡಿಸ್ಕಷನ್ ಸದಸ್ಯರ ಹೆಸರುಗಳನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಎಸ್​. ಶ್ರೀಶಾಂತ್ ಹೆಸರು ಕೂಡ ಕಾಣಿಸಿಕೊಂಡಿರುವುದು ವಿಶೇಷ.

2 / 6
ಅಂದರೆ ಈ ಬಾರಿಯ ಐಪಿಎಲ್​ ವೇಳೆ ಶ್ರೀಶಾಂತ್ ಸ್ಟಾರ್ ಸ್ಪೋರ್ಟ್ಸ್ ಮಲಯಾಳಂ ಚಾನೆಲ್​ನಲ್ಲಿ ವೀಕ್ಷಕ ವಿಶ್ಲೇಷಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ 10 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಸೆಕೆಂಡ್ ಇನಿಂಗ್ಸ್ ಶುರು ಮಾಡಲು ಶ್ರೀಶಾಂತ್ ಮುಂದಾಗಿದ್ದಾರೆ.

3 / 6
ಇನ್ನು ಶ್ರೀಶಾಂತ್ ಅಲ್ಲದೆ, ಈ ಬಾರಿ ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಜಾಕ್ವೆಸ್ ಕಾಲಿಸ್, ಆರೋನ್ ಫಿಂಚ್, ಕೆವಿನ್ ಪೀಟರ್ಸನ್, ಟಾಮ್ ಮೂಡಿ, ಇರ್ಫಾನ್ ಪಠಾಣ್ , ಪಾಲ್ ಕಾಲಿಂಗ್‌ವುಡ್, ಹರ್ಭಜನ್ ಸಿಂಗ್ , ಮುರಳಿ ವಿಜಯ್, ಮೊಹಮ್ಮದ್ ಕೈಫ್ ಮತ್ತು ಯೂಸುಫ್ ಪಠಾಣ್ ಕಾಣಿಸಿಕೊಳ್ಳಲಿದ್ದಾರೆ.

4 / 6
ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್, ಕೊಚ್ಚಿನ್ ಟಸ್ಕರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ಪರ ಒಟ್ಟು 44 ಪಂದ್ಯಗಳನ್ನಾಡಿದ್ದ ಶ್ರೀಶಾಂತ್ 40 ವಿಕೆಟ್ ಕಬಳಿಸಿ ಮಿಂಚಿದ್ದರು. ಇದರ ನಡುವೆ 2013 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುವಾಗ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು.

5 / 6
ಇದರ ಬೆನ್ನಲ್ಲೇ ಶ್ರೀಶಾಂತ್ ಅವರನ್ನು ಐಪಿಎಲ್​ನಿಂದ ಬ್ಯಾನ್ ಮಾಡಲಾಗಿತ್ತು. ಇದೀಗ ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ ಮೂಲಕ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6

Published On - 10:30 pm, Mon, 20 March 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್