Updated on: Apr 02, 2023 | 7:23 PM
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದೊಂದಿಗೆ ಐಪಿಎಲ್ನ ವಿಶೇಷ ದಾಖಲೆಯೊಂದನ್ನು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್ಆರ್ಹೆಚ್ ವಿರುದ್ಧ ಸ್ಯಾಮ್ಸನ್ 32 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್ನೊಂದಿಗೆ 55 ರನ್ ಬಾರಿಸಿದರು. ಈ 55 ರನ್ಗಳೊಂದಿಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 700 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ.
ವಿಶೇಷ ಎಂದರೆ ಸಂಜು ಸ್ಯಾಮ್ಸನ್ ಅವರನ್ನು ಹೊರತುಪಡಿಸಿ ಯಾವುದೇ ಬ್ಯಾಟರ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 600ಕ್ಕಿಂತ ಅಧಿಕ ರನ್ ಕಲೆಹಾಕಿಲ್ಲ. ಇದಾಗ್ಯೂ ಈ ಪಟ್ಟಿಯಲ್ಲಿ ಆರ್ಸಿಬಿ ತಂಡ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.
ಕಿಂಗ್ ಕೊಹ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ 20 ಇನಿಂಗ್ಸ್ನಲ್ಲಿ ಒಟ್ಟು 569 ರನ್ ಕಲೆಹಾಕಿದ್ದಾರೆ. ಈ ವೇಳೆ ಕೊಹ್ಲಿಯ ಬ್ಯಾಟ್ನಿಂದ 4 ಅರ್ಧಶತಕಗಳು ಮೂಡಿಬಂದಿದ್ದವು.
ಇದೀಗ ಕೇವಲ 20 ಇನಿಂಗ್ಸ್ಗಳ ಮೂಲಕ ಸಂಜು ಸ್ಯಾಮ್ಸನ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಒಟ್ಟು 725 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಎಸ್ಆರ್ಹೆಚ್ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.