IPL 2023: ರಿಷಭ್ ಪಂತ್ ಬಳಿಕ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮತ್ತೋರ್ವ ಆಟಗಾರನಿಗೆ ಗಾಯ..!

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್.

TV9 Web
| Updated By: ಝಾಹಿರ್ ಯೂಸುಫ್

Updated on: Feb 26, 2023 | 11:58 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನ ಆಟಗಾರರ ಗಾಯದ ಸಮಸ್ಯೆಗಳು ಮುನ್ನಲೆಗೆ ಬರುತ್ತಿದೆ. ಈಗಾಗಲೇ ಅಪಘಾತದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಮತ್ತೋರ್ವ ಆಟಗಾರ ಗಾಯಗೊಂಡಿದ್ದಾರೆ.

1 / 6
ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಯುವ ಬ್ಯಾಟರ್ ಸರ್ಫರಾಝ್ ಖಾನ್ ಅಭ್ಯಾಸದ ವೇಳೆ ಗಾಯ ಮಾಡಿಕೊಂಡಿದ್ದಾರೆ. ಡೆಲ್ಲಿ ತಂಡದ ಅಭ್ಯಾಸ ಶಿಬಿರದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಸರ್ಫರಾಝ್ ಅವರ ಎಡಗೈ ತೋರು ಬೆರಳಿಗೆ ಗಾಯವಾಗಿದೆ. ಹೀಗಾಗಿ ಅಭ್ಯಾಸವನ್ನು ನಿಲ್ಲಿಸಿದ್ದಾರೆ.

2 / 6
ಇನ್ನು ಗಾಯದ ಕಾರಣ ಸರ್ಫರಾಝ್ ಖಾನ್ ಇರಾನಿ ಕಪ್ ಟೂರ್ನಿಯಿಂಂದ ಹೊರಗುಳಿದಿದ್ದಾರೆ. ಇರಾನಿ ಕಪ್​ಗಾಗಿ ಆಯ್ಕೆ ಮಾಡಲಾದ ಶೇಷ ಭಾರತ ತಂಡದಲ್ಲಿ ಸರ್ಫರಾಝ್ ಆಯ್ಕೆಯಾಗಬೇಕಿತ್ತು. ಆದರೆ ಬೆರಳಿಗೆ ಗಾಯವಾಗಿರುವ ಕಾರಣ ಈ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 6
ತೋರು ಬೆರಳಿನ ಗಾಯವು ತುಸು ಗಂಭೀರವಾಗಿದ್ದು, ಹೀಗಾಗಿ ಈಡನ್​ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಸರ್ಫರಾಝ್ ಭಾಗವಹಿಸಿರಲಿಲ್ಲ. ಸದ್ಯ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿರುವ ಯುವ ದಾಂಡಿಗ ಮಾರ್ಚ್ 31 ರೊಳಗೆ ಗುಣಮುಖರಾಗುವ ವಿಶ್ವಾಸದಲ್ಲಿದ್ದಾರೆ.

4 / 6
ಇತ್ತ ರಿಷಭ್ ಪಂತ್ ಅವರ ಅಲಭ್ಯತೆಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸರ್ಫರಾಝ್ ಖಾನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಣಕ್ಕಿಳಿಸುವ ಇರಾದೆಯಲ್ಲಿತ್ತು. ಇದೀಗ ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಸರ್ಫರಾಝ್ ಕೂಡ ಗಾಯಗೊಂಡಿರುವುದು ಟೀಮ್ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್ .

6 / 6
Follow us