IPL 2023: RCB ಬೌಲರ್​ಗಳ ಬೆಂಡೆತ್ತಿ ಭರ್ಜರಿ ದಾಖಲೆ ನಿರ್ಮಿಸಿದ ಶಾರ್ದೂಲ್ ಠಾಕೂರ್

IPL 2023 Kannada: ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Apr 06, 2023 | 11:53 PM

IPL 2023: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶಾರ್ದೂಲ್ ಠಾಕೂರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

1 / 6
ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 12ನೇ ಓವರ್​ವರೆಗೆ ಮೇಲುಗೈ ಸಾಧಿಸಿದ್ದ ಆರ್​ಸಿಬಿ ಬೌಲರ್​ಗಳು ಶಾರ್ದೂಲ್ ಆಗಮನದೊಂದಿಗೆ ಮಂಕಾದರು.

2 / 6
ಅತ್ತ ಹೊಡಿಬಡಿ ಆಟದೊಂದಿಗೆ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 29 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 68 ರನ್​ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು.

3 / 6
ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಶಾರ್ದೂಲ್ ಠಾಕೂರ್ ಪಾಲಾಗಿದೆ. ಅಲ್ಲದೆ 6 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

4 / 6
ಇಲ್ಲದೆ ರಿಂಕು ಸಿಂಗ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡುವ ಮೂಲಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿ 2ನೇ ಜೋಡಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

5 / 6
ಇದೀಗ ಶಾರ್ದೂಲ್ ಠಾಕೂರ್ ಹಾಗೂ ರಿಂಕು ಸಿಂಗ್ 103 ರನ್​ಗಳ ಭರ್ಜರಿ ಜೊತೆಯಾಟದೊಂದಿಗೆ ಈ ವಿಶೇಷ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಾರ್ದೂಲ್ ಠಾಕೂರ್ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

6 / 6
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ