- Kannada News Photo gallery Cricket photos IPL 2023 Shikhar Dhawan joins Virat Kohli, David Warner with 50th half century in IPL
IPL 2023: 50ನೇ ಐವತ್ತು; ಕೊಹ್ಲಿ- ವಾರ್ನರ್ ಜೊತೆ ದಾಖಲೆ ಪುಟ ಸೇರಿದ ಶಿಖರ್ ಧವನ್..!
IPL 2023: ಸ್ಟಾರ್ ಇಂಡಿಯಾ ಬ್ಯಾಟರ್ ಮತ್ತು ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಸೋಮವಾರ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನದ 50 ನೇ ಅರ್ಧಶತಕವನ್ನು ಪೂರ್ಣಗೊಳಿಸಿದರು.
Updated on: May 09, 2023 | 5:26 PM

ಸ್ಟಾರ್ ಇಂಡಿಯಾ ಬ್ಯಾಟರ್ ಮತ್ತು ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಸೋಮವಾರ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನದ 50 ನೇ ಅರ್ಧಶತಕವನ್ನು ಪೂರ್ಣಗೊಳಿಸಿದರು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ಧವನ್ ಒಂಬತ್ತು ಬೌಂಡರಿ ಮತ್ತು ಒಂದು ಸಿಕ್ಸರ್ ಒಳಗೊಂಡಂತೆ 57 ರನ್ ಬಾರಿಸಿದರು.

ಈ ಅರ್ಧಶತಕದೊಂದಿಗೆ ಧವನ್, ವಿರಾಟ್ ಕೊಹ್ಲಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ನಂತರ ಎರಡನೇ ಭಾರತೀಯ ಮತ್ತು ಡೇವಿಡ್ ವಾರ್ನರ್ (ದೆಹಲಿ ಕ್ಯಾಪಿಟಲ್ಸ್) ನಂತರ ಅರ್ಧಶತಕಗಳ ಅರ್ಧಶತಕವನ್ನು ಪೂರ್ಣಗೊಳಿಸಿದ ಒಟ್ಟಾರೆ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

ವಾರ್ನರ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿದ ದಾಖಲೆ ಹೊಂದಿದ್ದು, ಈ ಆಸೀಸ್ ಕ್ರಿಕೆಟಿಗ ಐಪಿಎಲ್ನಲ್ಲಿ 57 ಅರ್ಧಶತಕ ಬಾರಿಸಿದ್ದಾರೆ. ಇದಲ್ಲದೆ ಐಪಿಎಲ್ನಲ್ಲಿ ನಾಲ್ಕು ಶತಕಗಳನ್ನು ಬಾರಿಸಿದ್ದಾರೆ.

ಇನ್ನು ಆರ್ಸಿಬಿ ಪರ ಆಡುತ್ತಿರುವ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ 50 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಕೊಹ್ಲಿ 5 ಶತಕಗಳನ್ನು ಸಿಡಿಸಿದ್ದಾರೆ.

ಒಟ್ಟಾರೆಯಾಗಿ, ಶಿಖರ್ ಧವನ್ ಐಪಿಎಲ್ನಲ್ಲಿ 35.93 ರ ಸರಾಸರಿಯಲ್ಲಿ ಮತ್ತು 127.16 ರ ಸ್ಟ್ರೈಕ್ ರೇಟ್‌ನಲ್ಲಿ 6,593 ರನ್ ಬಾರಿಸಿದ್ದಾರೆ. ಅಲ್ಲದೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎರಡು ಶತಕಗಳು ಮತ್ತು 50 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಪ್ರಸಕ್ತ ಸೀಸನ್ನಲ್ಲಿ ಇಲ್ಲಿಯವರೆಗೆ ಧವನ್, 58.16 ರ ಸರಾಸರಿಯಲ್ಲಿ ಮತ್ತು 143.62 ರ ಸ್ಟ್ರೈಕ್ ರೇಟ್‌ನಲ್ಲಿ 349 ರನ್ ಬಾರಿಸಿದ್ದಾರೆ. ಅಲ್ಲದೆ ಮೂರು ಅರ್ಧ ಶತಕಗಳನ್ನು ಬಾರಿಸಿದ್ದು, ಈ ಐಪಿಎಲ್ನಲ್ಲಿ ಒಂಬತ್ತನೇ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರಾಗಿದ್ದಾರೆ.




