ಧರ್ಮಶಾಲಾದಲ್ಲಿ ನಡೆದ ಕದನದಲ್ಲಿ ದೆಹಲಿ ಕ್ಯಾಪಿಟಲ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್‌ಗೆ ವೇಗಿ ಇಶಾಂತ್ ಶರ್ಮಾ ಮೊದಲ ಓವರ್ನಲ್ಲೇ ಶಾಕ್ ನೀಡಿದರು. ಇಶಾಂತ್ ಎಸೆತದಲ್ಲಿ ಸ್ಲಿಪ್ನಲ್ಲಿ ಕ್ಯಾಚಿತ್ತು ಗೋಲ್ಡನ್ ಡಕ್ ಆದ ಧವನ್, ಭಾರತದ ಮಾಜಿ ಬ್ಯಾಟರ್ ಗೌತಮ್ ಗಂಭೀರ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಟಾರ್ ಅಜಿಂಕ್ಯ ರಹಾನೆ ಅವರ ಬೇಡದ ದಾಖಲೆಯನ್ನು ಸರಿಗಟ್ಟಿದ್ದಾರೆ.