IPL 2023: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಶುಭ್​ಮನ್ ಗಿಲ್

Updated By: ಝಾಹಿರ್ ಯೂಸುಫ್

Updated on: May 16, 2023 | 5:28 PM

IPL 2023 Kannada: ಈ ಭರ್ಜರಿ ಸೆಂಚುರಿಯೊಂದಿಗೆ ಗುಜರಾತ್ ಟೈಟಾನ್ಸ್ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾಗಿದ್ದಾರೆ.

1 / 6
IPL 2023: ಐಪಿಎಲ್​ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕೂಡ ಮುರಿದಿದ್ದಾರೆ.

2 / 6
ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ ದಾಖಲೆಯಾಗಿದೆ.

3 / 6
ಅಂದರೆ ಐಪಿಎಲ್​ನಲ್ಲಿ ಸಿಕ್ಸ್​ ಬಾರಿಸದೇ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 2010 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಚಿನ್ ತೆಂಡೂಲ್ಕರ್ ಕೇವಲ 23 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು. ಈ ವೇಳೆ ಅವರು ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ.

4 / 6
ಇದೀಗ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಒಂದೇ ಒಂದು ಸಿಕ್ಸ್ ಸಿಡಿಸದೇ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇದರೊಂದಿಗೆ ಕಳೆದ 1 ದಶಕಗಳಿಂದ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಗಿಲ್ ಪಾಲಾಗಿದೆ.

5 / 6
ಇನ್ನು ಈ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ 56 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅಲ್ಲದೆ ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್​ನೊಂದಿಗೆ 101 ರನ್​ ಬಾರಿಸಿ ಮಿಂಚಿದ್ದರು.

6 / 6
ಇದರೊಂದಿಗೆ ಗುಜರಾತ್ ಟೈಟಾನ್ಸ್ ಪರ ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಶುಭ್​ಮನ್ ಗಿಲ್ ಪಾತ್ರರಾದರು.