AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubhman Gill: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಶುಭ್​ಮನ್ ಗಿಲ್

Shubhman Gill Century: ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಶುಭ್​ಮನ್ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಸುದರ್ಶನ್ ಜೊತೆಗೂಡಿ 2ನೇ ವಿಕೆಟ್​ಗೆ 147 ರನ್​ಗಳ​ ಜೊತೆಯಾಟವಾಡಿದರು.

TV9 Web
| Updated By: ಝಾಹಿರ್ ಯೂಸುಫ್|

Updated on:May 15, 2023 | 11:17 PM

Share
IPL 2023: ಐಪಿಎಲ್​ನ 62ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಶುಭ್​ಮನ್ ಗಿಲ್ (Shubhman Gill) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್​ ತಂಡದ ನಾಯಕ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 9
ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ಟೈಟಾನ್ಸ್ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ವೃದ್ದಿಮಾನ್ ಸಾಹ (0) ಮೊದಲ ಓವರ್​ನಲ್ಲೇ ವಿಕೆಟ್ ಒಪ್ಪಿಸಿದ್ದರು.

2 / 9
ಇದಾದ ಬಳಿಕ ಜೊತೆಯಾದ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಉತ್ತಮ ಜೊತೆಯಾಟವಾಡಿದರು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ ಸುದರ್ಶನ್ ಜೊತೆಗೂಡಿ 2ನೇ ವಿಕೆಟ್​ಗೆ 147 ರನ್​ಗಳ​ ಜೊತೆಯಾಟವಾಡಿದರು.

3 / 9
ಈ ಹಂತದಲ್ಲಿ 36 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ 47 ರನ್ ಬಾರಿಸಿದ ಸಾಯಿ ಸುದರ್ಶನ್ ಮಾರ್ಕೊ ಯಾನ್ಸನ್ ಎಸೆತದಲ್ಲಿ ಕ್ಯಾಚ್ ನೀಡಿದರು. ಇದಾಗ್ಯೂ ಶುಭ್​ಮನ್ ಗಿಲ್ ಅಬ್ಬರ ಮುಂದುವರೆಯಿತು.

4 / 9
ಸನ್​ರೈಸರ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಗಿಲ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ 56 ಎಸೆತಗಳಲ್ಲಿ ಶುಭ್​ಮನ್ ಗಿಲ್ ಶತಕ ಪೂರೈಸಿದರು.

5 / 9
ಅಂತಿಮವಾಗಿ 58 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 13 ಫೋರ್​ನೊಂದಿಗೆ 101 ರನ್​ ಬಾರಿಸಿದ ಶುಭ್​ಮನ್ ಗಿಲ್ ಭುವನೇಶ್ವರ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು.

6 / 9
ಶುಭ್​ಮನ್ ಗಿಲ್ ಅವರ ಈ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 188 ರನ್​ ಕಲೆಹಾಕಿದೆ.

7 / 9
ಈ ಭರ್ಜರಿ ಶತಕದೊಂದಿಗೆ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಮೊದಲ ಶತಕ ಬಾರಿಸಿದ ಆಟಗಾರ ಎಂಬ ದಾಖಲೆ ಶುಭ್​ಮನ್ ಗಿಲ್ ಪಾಲಾಗಿದೆ.

8 / 9
ಅಂದಹಾಗೆ ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಕೆನ್ನೇರಳೆ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿರುವುದು ವಿಶೇಷ. ಮಾರಕ ರೋಗ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ತನ್ನ ಕಡು ನೀಲಿ ಬಣ್ಣದ ಜೆರ್ಸಿ ಬದಲಿಗೆ ಕೆನ್ನೇರಳೆ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದೆ.

9 / 9

Published On - 9:23 pm, Mon, 15 May 23