IPL 2023: RCB ದಾಖಲೆ ಮುರಿದ SRH

IPL 2023 Kannada: ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ನೀಡಿದ 229 ರನ್​ಗಳ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡದ ಪರ ನಾಯಕ ನಿತೀಶ್ ರಾಣಾ (75) ಹಾಗೂ ರಿಂಕು ಸಿಂಗ್ (58) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 15, 2023 | 10:31 PM

IPL 2023: ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಐಪಿಎಲ್​ನ 19ನೇ ಪಂದ್ಯದ ಮೂಲಕ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರ್​ಸಿಬಿ ತಂಡದ ದಾಖಲೆಯೊಂದನ್ನು ಮುರಿದಿದೆ. ಎಸ್​ಆರ್​ಹೆಚ್​​ ನಡುವಣ ಪಂದ್ಯದಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡವು ಬೌಲಿಂಗ್ ಆಯ್ಕೆ ಮಾಡಿತ್ತು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಎಸ್​ಆರ್​ಹೆಚ್ ತಂಡಕ್ಕೆ ಆರಂಭಿಕ ಆಟಗಾರ ಹ್ಯಾರಿ ಬ್ರೂಕ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಬ್ರೂಕ್ 55 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 100 ರನ್ ಬಾರಿಸಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಎಸ್​ಆರ್​ಹೆಚ್ ತಂಡದ ಮೊತ್ತವು 4 ವಿಕೆಟ್ ನಷ್ಟಕ್ಕೆ 228 ರನ್​ಗೆ ಬಂದು ನಿಂತಿತು.

2 / 5
ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದು ಸನ್​ರೈಸರ್ಸ್ ಹೈದರಾಬಾದ್ ಪಾಲಾಯಿತು. ಅಂದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ದಾಖಲೆ ಆರ್​ಸಿಬಿ ಹೆಸರಿನಲ್ಲಿತ್ತು.

3 / 5
2019 ರಲ್ಲಿ ಆರ್​ಸಿಬಿ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ನಷ್ಟಕ್ಕೆ 213 ರನ್​ಗಳಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಮುರಿದು ಎಸ್​ಆರ್​ಹೆಚ್ ತಂಡವು ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

4 / 5
ಇನ್ನು ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ನೀಡಿದ 229 ರನ್​ಗಳ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡದ ಪರ ನಾಯಕ ನಿತೀಶ್ ರಾಣಾ (75) ಹಾಗೂ ರಿಂಕು ಸಿಂಗ್ (58) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಇದಾಗ್ಯೂ ಅಂತಿಮವಾಗಿ ಕೆಕೆಆರ್ ತಂಡವು 205 ರನ್​ಗಳಿಸುವುದರೊಂದಿಗೆ 23 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

5 / 5
Follow us