ಗುಜರಾತ್ ಟೈಟಾನ್ಸ್: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಕೂಡ ಬಲಿಷ್ಠ ಆಟಗಾರರನ್ನು ಹೊಂದಿದೆ. ತಂಡದಲ್ಲಿ ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತಿವಾಠಿಯಾ ಹಾಗೂ ಮ್ಯಾಥ್ಯೂ ವೇಡ್ನಂತಹ ಆಟಗಾರರಿದ್ದಾರೆ. ಜೊತೆಗೆ ಅತ್ಯುತ್ತಮ ಸ್ಪಿನ್ನರ್ ರಶೀದ್ ಖಾನ್ ಕೂಡ ಜಿಟಿ ತಂಡದಲ್ಲಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ತಂಡವನ್ನು ಕೂಡ ಪ್ಲೇಆಫ್ನಲ್ಲಿ ಎದುರು ನೋಡಬಹುದು ಎಂದು ಸ್ಮಿತ್ ಭವಿಷ್ಯ ನುಡಿದಿದ್ದಾರೆ.