Suryakumar Yadav: ಸ್ಪೋಟಕ ಬ್ಯಾಟಿಂಗ್​ ಮೂಲಕ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

| Updated By: ಝಾಹಿರ್ ಯೂಸುಫ್

Updated on: Apr 24, 2023 | 9:26 PM

IPL 2023 Kannada: ಪಂಜಾಬ್ ಕಿಂಗ್ಸ್ ವಿರುದ್ಧದ ಅರ್ಧಶತಕದೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ.

1 / 6
IPL 2023: ಟಿ20 ಕ್ರಿಕೆಟ್​ನ ಸಿಡಿಲಮರಿ ಸೂರ್ಯಕುಮಾರ್ ಯಾದವ್ ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 26 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ 57 ರನ್​ ಬಾರಿಸಿ ಅಬ್ಬರಿಸಿದ್ದರು. ಈ ಅಬ್ಬರದ ಬ್ಯಾಟಿಂಗ್​ನೊಂದಿಗೆ ಸೂರ್ಯ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

2 / 6
ಹೌದು, ಪಂಜಾಬ್ ಕಿಂಗ್ಸ್ ವಿರುದ್ಧದ ಅರ್ಧಶತಕದೊಂದಿಗೆ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್​ನಲ್ಲಿ 6 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ.

3 / 6
ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6000 ರನ್​ ಕಲೆಹಾಕಿದ ಭಾರತೀಯ ಬ್ಯಾಟರ್​ ಎಂಬ ವಿಶೇಷ ದಾಖಲೆ ಸೂರ್ಯಕುಮಾರ್ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿತ್ತು.

4 / 6
ಸುರೇಶ್ ರೈನಾ 4295 ಎಸೆತಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ 6000 ರನ್ ಪೂರೈಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಿದ್ದಾರೆ.

5 / 6
ಸೂರ್ಯಕುಮಾರ್ ಯಾದವ್ ಕೇವಲ 4017 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು, ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 6000 ರನ್​ ಪೂರೈಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಂಡ್ರೆ ರಸೆಲ್. ವೆಸ್ಟ್ ಇಂಡೀಸ್​ನ ಸ್ಪೋಟಕ ಬ್ಯಾಟರ್ ಕೇವಲ 3550 ಎಸೆತಗಳಲ್ಲಿ 6 ಸಾವಿರ ರನ್ ಪೂರೈಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Published On - 9:23 pm, Mon, 24 April 23