IPL 2023 GT vs KKR: ಅಹಮದಾಬಾದ್ನಲ್ಲಿ ನಡೆದ ಐಪಿಎಲ್ನ 13ನೇ ಪಂದ್ಯದಲ್ಲಿ ವಿಜಯ್ ಶಂಕರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ಹಂಗಾಮಿ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಗುಜರಾತ್ ತಂಡವು 14ನೇ ಓವರ್ನಲ್ಲಿ 3 ವಿಕೆಟ್ ಕಳೆದುಕೊಂಡು 118 ರನ್ ಕಲೆಹಾಕಿತ್ತು.