Virat Kohli: ಕ್ರಿಸ್ ಗೇಲ್ ದಾಖಲೆ ಧೂಳೀಪಟ ಮಾಡಿದ ವಿರಾಟ್ ಕೊಹ್ಲಿ
IPL 2023 Kannada: ಇನಿಂಗ್ಸ್ ಆರಂಭಿಸಿದ ಆರ್ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 137 ರನ್ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
Updated on:Apr 20, 2023 | 7:07 PM

IPL 2023: ಮೊಹಾಲಿಯಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಆರ್ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 137 ರನ್ಗಳ ಜೊತೆಯಾಟವಾಡಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.

ಈ ಹಂತದಲ್ಲಿ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ನೊಂದಿಗೆ 59 ರನ್ ಬಾರಿಸಿದ್ದ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ದ್ವಿತೀಯ ಸ್ಥಾನದಲ್ಲಿದ್ದರು. ಗೇಲ್ 463 ಟಿ20 ಇನಿಂಗ್ಸ್ಗಳಲ್ಲಿ 88 ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು.

ಇದೀಗ 366 ಟಿ20 ಇನಿಂಗ್ಸ್ಗಳ ಮೂಲಕ ವಿರಾಟ್ ಕೊಹ್ಲಿ ಒಟ್ಟು 89 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಹಾಫ್ ಸೆಂಚುರಿ ದಾಖಲೆ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. 347 ಟಿ20 ಇನಿಂಗ್ಸ್ ಆಡಿರುವ ವಾರ್ನರ್ ಒಟ್ಟು 96 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ಈ ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಬೇಕಿರುವುದು ಕೇವಲ 8 ಅರ್ಧಶತಕಗಳು ಮಾತ್ರ.
Published On - 7:03 pm, Thu, 20 April 23



















