- Kannada News Photo gallery Cricket photos IPL 2023: Virat Kohli set to captain RCB in match against PBKS
IPL 2023: RCB ತಂಡಕ್ಕೆ ಮತ್ತೆ ವಿರಾಟ್ ಕೊಹ್ಲಿ ನಾಯಕ: ಕಾರಣವೇನು?
IPL 2023 Kannada: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ.
Updated on: Apr 20, 2023 | 3:52 PM

IPL 2023: ಮೊಹಾಲಿಯಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರ್ಸಿಬಿ ತಂಡದ ನಾಯಕರಾಗಿ ಕಣಕ್ಕಿಳಿದಿದ್ದಾರೆ. 2013 ರಿಂದ 2021 ರವರೆಗೆ ಆರ್ಸಿಬಿ ನಾಯಕರಾಗಿ ಕಾಣಿಸಿಕೊಂಡಿದ್ದ ಕೊಹ್ಲಿ ಮತ್ತೆ ತಂಡದ ಸಾರಥ್ಯವಹಿಸಲು ಮುಖ್ಯ ಕಾರಣ ಫಾಫ್ ಡುಪ್ಲೆಸಿಸ್ ಅವರ ಗಾಯದ ಸಮಸ್ಯೆ.

ಹೌದು, ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಸಿಎಸ್ಕೆ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಡುಪ್ಲೆಸಿಸ್ ಅವರ ಪೆಕ್ಕೆಲುಬಿಗೆ ಗಾಯವಾಗಿತ್ತು. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದಾರೆ.

ಅಂದರೆ ಫೀಲ್ಡಿಂಗ್ ಮಾಡಲು ಸಂಪೂರ್ಣ ಫಿಟ್ ಆಗಿರ ಕಾರಣ ಡುಪ್ಲೆಸಿಸ್ ಬ್ಯಾಟಿಂಗ್ ಮುಗಿದ ಬಳಿಕ ಹೊರಗುಳಿಯಲಿದ್ದಾರೆ. ಅವರ ಬದಲಿಗೆ ಮತ್ತೋರ್ವ ಬೌಲರ್ ಕಣಕ್ಕಿಳಿಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಇನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ಫಾಫ್ ಡುಪ್ಲೆಸಿಸ್ ಸಂಪೂರ್ಣವಾಗಿ ಚೇತರಿಸಿಕೊಂಡರೆ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ.

ಹಾಗೆಯೇ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಬದಲಿಗೆ ಪಂಜಾಬ್ ಕಿಂಗ್ಸ್ ತಂಡವನ್ನು ಈ ಪಂದ್ಯದಲ್ಲೂ ಸ್ಯಾಮ್ ಕರನ್ ಮುನ್ನಡೆಸುತ್ತಿದ್ದಾರೆ.

ಇತ್ತ ಶುಭ್ಮನ್ ಗಿಲ್ ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದರೆ ಪಂಜಾಬ್ ಕಿಂಗ್ಸ್ ಪಾಲಾಗುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಆಟಗಾರನ ಖರೀದಿ ಮಾಡಿದ ದಾಖಲೆ ಇರುವುದು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಹೆಸರಿನಲ್ಲಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ (ನಾಯಕ), ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್



















