Virat Kohli: ಕಿಂಗ್ ಕೊಹ್ಲಿಯ ಸಿಡಿಲಬ್ಬರದ ಸೆಂಚುರಿಗೆ ಹಳೆಯ ದಾಖಲೆಗಳು ಧೂಳೀಪಟ

Virat Kohli Records: ಆರ್​ಸಿಬಿ ಪರ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೊಸ ದಾಖಲೆಯೊಂದು ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಪಾಲಾಗಿದೆ.

| Updated By: ಝಾಹಿರ್ ಯೂಸುಫ್

Updated on: May 18, 2023 | 11:52 PM

IPL 2023: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಕ್ಷರಶಃ ಅಬ್ಬರಿಸಿದ್ದಾರೆ. ಅದು ಅಂತಿಂಥ ಅಬ್ಬರವಲ್ಲ ಸೆಂಚುರಿಯ ಸಿಡಿಲಬ್ಬರ.

1 / 12
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡವು 186 ರನ್​ಗಳಿಸಿ ಆರ್​ಸಿಬಿಗೆ ಬೃಹತ್ ಟಾರ್ಗೆಟ್ ನೀಡಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

2 / 12
ಪವರ್​ಪ್ಲೇನಲ್ಲಿ 64 ರನ್​ ಬಾರಿಸಿದ ಈ ಜೋಡಿ 12ನೇ ಓವರ್​ ವೇಳೆಗೆ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಲ್ಲದೆ ಇಬ್ಬರೂ ಕೂಡ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

3 / 12
ಈ ಅರ್ಧಶತಕದ ಬಳಿಕ ವಿರಾಟ್ ಕೊಹ್ಲಿಯ ಸಿಡಿಲಬ್ಬರ ಶುರುವಾಯಿತು. ಎಸ್​ಆರ್​ಹೆಚ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕಿಂಗ್ ಕೊಹ್ಲಿ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳನ್ನು ಸಿಡಿಸಿದರು.

4 / 12
ಅಲ್ಲದೆ 94 ರನ್​ಗಳಿಸಿದ್ದ ವೇಳೆ ಭುವನೇಶ್ವರ್​ ಕುಮಾರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಕೇವಲ 62 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಐಪಿಎಲ್​ನಲ್ಲಿ ಹಲವು ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

5 / 12
ಹೌದು, ಇದು ಐಪಿಎಲ್​ನಲ್ಲಿನ ವಿರಾಟ್ ಕೊಹ್ಲಿ 6ನೇ ಶತಕ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಸೆಂಚುರಿ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಅಗ್ರಸ್ಥಾನದಲ್ಲಿ ಕ್ರಿಸ್ ಗೇಲ್ ಇದ್ದರು. ಗೇಲ್ ಒಟ್ಟು 6 ಶತಕ ಬಾರಿಸಿದ್ದರೂ, ಸದ್ಯ ಸಕ್ರೀಯರಾಗಿರುವ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.

6 / 12
ಇನ್ನು ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

7 / 12
ಹಾಗೆಯೇ ಈ ಶತಕದೊಂದಿಗೆ ಐಪಿಎಲ್​ನಲ್ಲಿ 7500 ರನ್ ಕೂಡ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 7 ಸಾವಿರದ ಐನೂರು ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

8 / 12
ಇದಲ್ಲದೆ ಆರ್​ಸಿಬಿ ಪರ ಒಂದೇ ಸೀಸನ್​ನಲ್ಲಿ ಅತೀ ಹೆಚ್ಚು ಬಾರಿ ಅರ್ಧಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿ ಎಂಬ ಹೊಸ ದಾಖಲೆಯೊಂದು ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಪಾಲಾಗಿದೆ.

9 / 12
ಕಿಂಗ್ ಕೊಹ್ಲಿ ಹಾಗೂ ಡೇಂಜರಸ್ ಡುಪ್ಲೆಸಿಸ್ ಈ ಬಾರಿಯ ಐಪಿಎಲ್​ನಲ್ಲಿ 7 ಬಾರಿ ಮೊದಲ ವಿಕೆಟ್​ಗೆ 50+ ರನ್​ಗಳ ಜೊತೆಯಾಟವಾಡಿದ್ದಾರೆ.

10 / 12
ಹಾಗೆಯೇ ಆರ್​ಸಿಬಿ ಪರ ಅತ್ಯಧಿಕ ಬಾರಿ ಶತಕದ ಜೊತೆಯಾಟವಾಡಿದ ಆರಂಭಿಕ ಜೋಡಿಯಾಗಿ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಗುರುತಿಸಿಕೊಂಡಿದ್ದಾರೆ. ಅದು ಕೂಡ ತನ್ನದೇ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ

11 / 12
ಈ ಹಿಂದೆ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಹಾಗೂ ಕ್ರಿಸ್ ಗೇಲ್ ಜೋಡಿ ಒಟ್ಟು 4 ಬಾರಿ ಶತಕದ ಜೊತೆಯಾಟವಾಡಿದ್ದರು. ಇದೀಗ ಫಾಫ್ ಡುಪ್ಲೆಸಿಸ್ ಜೊತೆಗೂಡಿ ಕಿಂಗ್ ಕೊಹ್ಲಿ ಈ ದಾಖಲೆಯನ್ನು ಸರಿಗಟ್ಟಿರುವುದು ವಿಶೇಷ.

12 / 12
Follow us
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ

Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ

Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ

ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ