AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಇಂದು ವಿರಾಟ್ ಕೊಹ್ಲಿ ಶತಕ ಬಾರಿಸಿದ್ರೆ, ಅದು ಗಂಗೂಲಿಗೆ ಕೊಡುವ ದೊಡ್ಡ ಗೌರವ: ಶ್ರೀಶಾಂತ್

IPL 2023 Kannada: ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

TV9 Web
| Edited By: |

Updated on: May 06, 2023 | 3:58 PM

Share
IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ರೆ, ಅದು ಸೌರವ್ ಗಂಗೂಲಿಗೆ ನೀಡುವ ದೊಡ್ಡ ಗೌರವ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಶ್ರೀಶಾಂತ್.

1 / 8
ಈ ಬಗ್ಗೆ ಮಾತನಾಡಿರುವ ಶ್ರೀಶಾಂತ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಸೌರವ್ ಗಂಗೂಲಿಗೆ ಪರಿಪೂರ್ಣ ಗೌರವ ನೀಡುವ ಅವಕಾಶ ಹೊಂದಿದ್ದಾರೆ. ಒಂದು ವೇಳೆ ಅವರು ಈ ಪಂದ್ಯದಲ್ಲಿ ಶತಕ ಸಿಡಿಸಿದ್ರೆ, ಅದು ದಾದಾಗೆ ಕೊಹ್ಲಿ ನೀಡುವ ಅತಿ ದೊಡ್ಡ ಗೌರವಾಗಿರಲಿದೆ ಎಂದು ಶ್ರೀಶಾಂತ್ ಹೇಳಿದ್ದಾರೆ.

2 / 8
ಮೇಲ್ನೋಟಕ್ಕೆ ಶ್ರೀಶಾಂತ್ ಅವರ ಈ ಹೇಳಿಕೆಯು ಕಿಚಾಯಿಸಿದಂತಿದೆ. ಏಕೆಂದರೆ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ವೈಮನಸ್ಸಿದೆ. ಹೀಗಾಗಿ ಕೊಹ್ಲಿ ಶತಕ ಸಿಡಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಆಗಿರುವ ಗಂಗೂಲಿಗೆ ತಿರುಗೇಟು ನೀಡಬಹುದು ಎಂದು ಶ್ರೀಶಾಂತ್ ಪರೋಕ್ಷವಾಗಿ ತಿಳಿಸಿದ್ದಾರೆ.

3 / 8
ಇದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫೀಲ್ಡಿಂಗ್ ಮಾಡುವಾಗ ಗಂಗೂಲಿಯನ್ನು ಗುರಾಯಿಸಿದ್ದರು. ಅಲ್ಲದೆ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಹಸ್ತಲಾಘವ ಮಾಡಿರಲಿಲ್ಲ. ಇದರೊಂದಿಗೆ ಇಬ್ಬರ ನಡುವಣ ಶೀತಮ ಸಮರ ಕೂಡ ಬಹಿರಂಗವಾಗಿತ್ತು.

4 / 8
ಅಂದಹಾಗೆ ಈ ಶೀತಲ ಸಮರಕ್ಕೆ ಮುಖ್ಯ ಕಾರಣ 2021 ರಲ್ಲಿ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ವಜಾಗೊಳಿಸಿದ್ದು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದದ್ದು ಸೌರವ್ ಗಂಗೂಲಿ.

5 / 8
ಅಂದು ನಾಯಕತ್ವದಿಂದ ಕೆಳಗಿಳಿಸುವ ತಮ್ಮ ನಿರ್ಧಾರವನ್ನು ವಿರಾಟ್ ಕೊಹ್ಲಿಗೆ ತಿಳಿಸಲಾಗಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ತಂಡದ ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮುಂಚಿತವಾಗಿ ತಿಳಿಸದೆ ಬಿಸಿಸಿಐ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದರು.

ಅಂದಹಾಗೆ ಟೀಮ್ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ವಿರಾಟ್ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಶೀತಲ ಸಮರ ಶುರುವಾಗಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಗಂಗೂಲಿ ಕೆಳಗಿಳಿದಿದ್ದಾರೆ. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ-ದಾದಾ ನಡುವಣ ಮುನಿಸು ಮಾತ್ರ ಕೊನೆಗೊಂಡಿಲ್ಲ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

6 / 8
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಒಂದೂವರೆ ಗಂಟೆಗಳ ಮೊದಲು ಚೇತನ್ ಶರ್ಮಾ ಅವರು ದೂರವಾಣಿ ಮೂಲಕ ಈ ಕ್ರಮದ ಬಗ್ಗೆ ತಿಳಿಸಿದ್ದರು ಎಂದು ಕೊಹ್ಲಿ ಹೇಳಿದ್ದರು. ಈ ಹೇಳಿಕೆಯ ಬಳಿಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಬಹಿರಂಗವಾಗಿತ್ತು.

7 / 8
ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ನಡುವೆ ಆರ್​ಸಿಬಿ-ಡೆಲ್ಲಿ ನಡುವಣ ಪಂದ್ಯದ ವೇಳೆ ಇಬ್ಬರು ಮತ್ತೆ ಮುಖಾಮುಖಿಯಾಗಿದ್ದು, ಇದಾಗ್ಯೂ ಕೊಹ್ಲಿ-ದಾದಾ ಹಸ್ತಲಾಘವ ಮಾಡದಿರಲಿಲ್ಲ. ಇದೀಗ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯ ನಡೆಯುತ್ತಿದೆ. ಇದೇ ವೇಳೆ ಶ್ರೀಶಾಂತ್ ಅವರ ಶತಕದ ಗೌರವದ ಹೇಳಿಕೆಯು ಎಲ್ಲರ ಗಮನ ಸೆಳೆದಿದೆ.

8 / 8
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್