- Kannada News Photo gallery Cricket photos IPL 2023 Virat Kohli completed 3000 runs in Chinnaswamy in the T20 format
Virat Kohli: ಬೆಂಗಳೂರಿನಲ್ಲಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
Virat Kohli Records: 201 ರನ್ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಕಿಂಗ್ ಕೊಹ್ಲಿ ಅರ್ಧಶತಕ ಬಾರಿಸಿದ್ದರು.
Updated on: Apr 26, 2023 | 11:11 PM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಜೇಸನ್ ರಾಯ್ (56) ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.

201 ರನ್ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಕಿಂಗ್ ಕೊಹ್ಲಿ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅಲ್ಲದೆ 37 ಎಸೆತಗಳಲ್ಲಿ 6 ಫೋರ್ನೊಂದಿಗೆ 54 ರನ್ ಬಾರಿಸಿ ಔಟಾದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3000 ರನ್ ಪೂರೈಸಿದ್ದಾರೆ. ಅದು ಕೂಡ ಕೇವಲ ಟಿ20 ಪಂದ್ಯಗಳ ಮೂಲಕ ಎಂಬುದು ವಿಶೇಷ.

ಇದರೊಂದಿಗೆ ಒಂದೇ ಮೈದಾನದಲ್ಲಿ ಟಿ20 ಕ್ರಿಕೆಟ್ನಲ್ಲಿ 3 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಪಾಲಾಗಿದೆ. ಅದು ಕೂಡ ಆರ್ಸಿಬಿ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ವಿಶ್ವ ದಾಖಲೆ ಮೂಡಿಬಂದಿರುವುದು ವಿಶೇಷ.
