IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 20ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ 34 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ನೊಂದಿಗೆ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದರು.