IPL 2023: ಸೋತರೂ ಐಪಿಎಲ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ಫಾಫ್-ಕಿಂಗ್ ಕೊಹ್ಲಿ

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 22, 2023 | 12:34 AM

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 70ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

2 / 7
ಮೊದಲೆರಡು ಓವರ್​ಗಳಲ್ಲಿ ಎಚ್ಚರಿಕೆಯ ಆಟವಾಡಿದ ಈ ಜೋಡಿಯು ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ಶಮಿ ಎಸೆದ 3ನೇ ಓವರ್​ನಲ್ಲಿ 4 ಫೋರ್​ನೊಂದಿಗೆ ಫಾಫ್ 16 ರನ್ ಚಚ್ಚಿದರು. ಇನ್ನು ಯಶ್ ದಯಾಳ್ ಅವರ 4ನೇ ಓವರ್​ನಲ್ಲಿ 17 ರನ್​ ಬಾರಿಸಿದರು.

3 / 7
ಇನ್ನು ಐದನೇ ಓವರ್​ನಲ್ಲೇ ತಂಡದ ಮೊತ್ತವನ್ನು 50 ರ ಗಡಿದಾಟಿಸಿದರು. ಅಲ್ಲದೆ ಪವರ್​ಪ್ಲೇನಲ್ಲಿ 62 ರನ್ ಸಿಡಿಸಿ ಕಿಂಗ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಅಬ್ಬರಿಸಿದರು. ಈ ಅಬ್ಬರದ ಅರ್ಧಶತಕದ ಜೊತೆಯಾಟದೊಂದಿಗೆ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 7
ಹೌದು, ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಬಾರಿ ಅರ್ಧಶತಕದ ಜೊತೆಯಾಟವಾಡಿದ ದಾಖಲೆ ಫಾಫ್ ಡುಪ್ಲೆಸಿಸ್ ಹಾಗೂ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. ಸಿಎಸ್​ಕೆ ಪರ ಆರಂಭಿಕ ಕಣಕ್ಕಿಳಿದಿದ್ದ ಈ ಜೋಡಿಯು 2021 ರಲ್ಲಿ ಒಟ್ಟು 7 ಬಾರಿ ಅರ್ಧಶತಕದ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದರು.

5 / 7
ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಜೊತೆಗೂಡಿ ಫಾಫ್ ಡುಪ್ಲೆಸಿಸ್ 8 ಬಾರಿ ಅರ್ಧಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ನ ಹಳೆಯ ದಾಖಲೆಯನ್ನು ಅಳಿಸಿ ಹಾಕಿ, ಫಾಫ್-ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (38) ಹಾಗೂ ಫಾಫ್ ಡುಪ್ಲೆಸಿಸ್ (28) ಮೊದಲ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ನೂರ್ ಅಹ್ಮದ್​ರ ಎಸೆತದಲ್ಲಿ ಡುಪ್ಲೆಸಿಸ್ ವಿಕೆಟ್ ಒಪ್ಪಿಸಿದರು.

7 / 7
Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ