Virat Kohli: ಗಂಭೀರ್ ವಿರುದ್ಧ ಸೇಡು ತೀರಿಸಿಕೊಂಡ ವಿರಾಟ್ ಕೊಹ್ಲಿ
IPL 2023- Virat Kohli vs Gautam Gambhir: ಆರ್ಸಿಬಿ ನೀಡಿದ 127 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು.
Updated on:May 02, 2023 | 1:11 AM

IPL 2023 LSG vs RCB: ಏಪ್ರಿಲ್ 10 ರಂದು..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು 1 ವಿಕೆಟ್ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತ್ತು.

ಈ ಗೆಲುವಿನ ಸಂಭ್ರಮದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಆರ್ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

ಇದೀಗ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೂ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಅವರ ನಡೆಗೆ ಪ್ರತ್ಯುತ್ತರ ನೀಡಿದ್ದಾರೆ. ಅದು ಕೂಡ ಅದೇ ಸ್ಟೈಲ್ನಲ್ಲಿ ಪ್ರೇಕ್ಷಕರತ್ತ ಸನ್ನೆ ಮಾಡುವ ಮೂಲಕ ಎಂಬುದು ವಿಶೇಷ.

ಆರ್ಸಿಬಿ ನೀಡಿದ 127 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಕ್ರೀಸ್ಗೆ ಆಗಮಿಸಿದ ಕೃನಾಲ್ ಪಾಂಡ್ಯ ಸಿರಾಜ್ ಅವರ ಓವರ್ನಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿ ಅಬ್ಬರಿಸಿದ್ದರು. ಇತ್ತ ಪಾಂಡ್ಯ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

ಆದರೆ ಮರು ಓವರ್ನಲ್ಲೇ ಮ್ಯಾಕ್ಸ್ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್ನಲ್ಲಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕಿಂಗ್ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿದರು.

ಅಭಿಮಾನಿಗಳತ್ತ ಮುಖ ಮಾಡಿದ ಕೊಹ್ಲಿ ಫ್ಲೈ ಕಿಸ್ ನೀಡಿ, ಬಾಯಿ ಮುಚ್ಕೊಂಡಿರಬೇಡಿ. ಎಲ್ಲರೂ ಸಂಭ್ರಮಿಸಿ ಎಂದು ಆರ್ಸಿಬಿ ಲೋಗೋ ಮುಟ್ಟಿ ಸೂಚಿಸಿದರು. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೌತಮ್ ಗಂಭೀರ್ ಆರ್ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ, ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ಹುರಿದುಂಬಿಸಿದರು.

ಇದೀಗ ಲಕ್ನೋನದಲ್ಲಿ ನೆರೆದಿದ್ದ ಪ್ರೇಕ್ಷಕರತ್ತ ವಿರಾಟ್ ಕೊಹ್ಲಿ ನೀಡಿದ ಸೂಚನೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳು ಕೊಹ್ಲಿಯ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಇತ್ತ ಆರ್ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಯ ನಡೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಇದು ಗಂಭೀರ್ಗೆ ನೀಡಿದ ಪ್ರತ್ಯುತ್ತರ ಎಂದು ಫುಲ್ ಖುಷಿ ವ್ಯಕ್ತಪಡಿಸುತ್ತಿದ್ದಾರೆ.
Published On - 11:37 pm, Mon, 1 May 23
























