Virat Kohli: ಗಂಭೀರ್​ ವಿರುದ್ಧ ಸೇಡು ತೀರಿಸಿಕೊಂಡ ವಿರಾಟ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: May 02, 2023 | 1:11 AM

IPL 2023- Virat Kohli vs Gautam Gambhir: ಆರ್​ಸಿಬಿ ನೀಡಿದ 127 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್​ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು.

1 / 8
IPL 2023 LSG vs RCB: ಏಪ್ರಿಲ್ 10 ರಂದು..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ ತಂಡವನ್ನು 1 ವಿಕೆಟ್​ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲಿಸಿತ್ತು.

2 / 8
ಈ ಗೆಲುವಿನ ಸಂಭ್ರಮದಲ್ಲಿದ್ದ ಲಕ್ನೋ ಸೂಪರ್​ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

3 / 8
ಇದೀಗ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಲಕ್ನೂ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಗೌತಮ್ ಗಂಭೀರ್ ಅವರ ನಡೆಗೆ ಪ್ರತ್ಯುತ್ತರ ನೀಡಿದ್ದಾರೆ. ಅದು ಕೂಡ ಅದೇ ಸ್ಟೈಲ್​ನಲ್ಲಿ ಪ್ರೇಕ್ಷಕರತ್ತ ಸನ್ನೆ ಮಾಡುವ ಮೂಲಕ ಎಂಬುದು ವಿಶೇಷ.

4 / 8
ಆರ್​ಸಿಬಿ ನೀಡಿದ 127 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಲಕ್ನೋ ತಂಡವು ಮೊದಲ ಓವರ್​ನಲ್ಲೇ ಕೈಲ್ ಮೇಯರ್ಸ್ ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಕ್ರೀಸ್​ಗೆ ಆಗಮಿಸಿದ ಕೃನಾಲ್ ಪಾಂಡ್ಯ ಸಿರಾಜ್ ಅವರ ಓವರ್​ನಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿ ಅಬ್ಬರಿಸಿದ್ದರು. ಇತ್ತ ಪಾಂಡ್ಯ ಅಬ್ಬರದೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

5 / 8
ಆದರೆ ಮರು ಓವರ್​ನಲ್ಲೇ ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕಿಂಗ್ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿದರು.

6 / 8
ಅಭಿಮಾನಿಗಳತ್ತ ಮುಖ ಮಾಡಿದ ಕೊಹ್ಲಿ ಫ್ಲೈ ಕಿಸ್ ನೀಡಿ, ಬಾಯಿ ಮುಚ್ಕೊಂಡಿರಬೇಡಿ. ಎಲ್ಲರೂ ಸಂಭ್ರಮಿಸಿ ಎಂದು ಆರ್​ಸಿಬಿ ಲೋಗೋ ಮುಟ್ಟಿ ಸೂಚಿಸಿದರು. ಈ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ, ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ಹುರಿದುಂಬಿಸಿದರು.

7 / 8
ಇದೀಗ ಲಕ್ನೋನದಲ್ಲಿ ನೆರೆದಿದ್ದ ಪ್ರೇಕ್ಷಕರತ್ತ ವಿರಾಟ್ ಕೊಹ್ಲಿ ನೀಡಿದ ಸೂಚನೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಅಭಿಮಾನಿಗಳು ಕೊಹ್ಲಿಯ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

8 / 8
ಆದರೆ ಇತ್ತ ಆರ್​ಸಿಬಿ ಅಭಿಮಾನಿಗಳು ಕಿಂಗ್ ಕೊಹ್ಲಿಯ ನಡೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಇದು ಗಂಭೀರ್​ಗೆ ನೀಡಿದ ಪ್ರತ್ಯುತ್ತರ ಎಂದು ಫುಲ್ ಖುಷಿ ವ್ಯಕ್ತಪಡಿಸುತ್ತಿದ್ದಾರೆ.

Published On - 11:37 pm, Mon, 1 May 23