AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: 9 ಪಂದ್ಯಗಳಲ್ಲಿ 3 ಬಾರಿ ದಂಡ ಕಟ್ಟಿದ ವಿರಾಟ್ ಕೊಹ್ಲಿ..!

IPL 2023 Kannada: ಈ 9 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 3 ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ ಮೂರು ಬಾರಿ ಕೂಡ ದಂಡವನ್ನೂ ಸಹ ಪಾವತಿಸಿದ್ದಾರೆ.

TV9 Web
| Edited By: |

Updated on: May 02, 2023 | 11:08 PM

Share
IPL 2023: ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ 364 ರನ್​ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.

1 / 7
ವಿಶೇಷ ಎಂದರೆ ಈ 9 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 3 ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ ಮೂರು ಬಾರಿ ಕೂಡ ದಂಡವನ್ನೂ ಸಹ ಪಾವತಿಸಿದ್ದಾರೆ.

2 / 7
ಏಪ್ರಿಲ್ 17 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಈ ರೀತಿಯ ಸಂಭ್ರಮವು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧವಾಗಿದೆ. ಹೀಗಾಗಿ ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು.

3 / 7
ಇದಾದ ಬಳಿಕ ಏಪ್ರಿಲ್ 23 ರಂದು ನಡೆದ ರಾಜಸ್ಥಾನ್ ರಾಯಲ್ಸ್​ ಪಂದ್ಯದಲ್ಲಿ ನಿಧಾನಗತಿಯ ಓವರ್​ ರೇಟ್​ಗಾಗಿ ವಿರಾಟ್ ಕೊಹ್ಲಿ ಶಿಕ್ಷೆಗೆ ಗುರಿಯಾಗಿದ್ದರು. ಈ ಪಂದ್ಯದಲ್ಲಿ ಹಂಗಾಮಿ ನಾಯಕರಾಗಿ ಕಾಣಿಸಿಕೊಂಡಿದ್ದ ವಿರಾಟ್ ಕೊಹ್ಲಿ ನಿಗದಿತ ಸಮಯದೊಳಗೆ 20 ಓವರ್​ ಪೂರ್ಣಗೊಳಿಸಿರಲಿಲ್ಲ. ಐಪಿಎಲ್​ನ ಕನಿಷ್ಠ ಓವರ್ ರೇಟ್ ಅಪರಾಧಗಳ ಅಡಿಯಲ್ಲಿ ಕಿಂಗ್ ಕೊಹ್ಲಿಗೆ 24 ಲಕ್ಷ ರೂ. ದಂಡ ವಿಧಿಸಲಾಗಿತ್ತು.

4 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯ ಲೆವೆಲ್-2 ಅಪರಾಧಕ್ಕಾಗಿ ವಿರಾಟ್ ಕೊಹ್ಲಿಗೆ ಪಂದ್ಯ ಶೇ.100 ರಷ್ಟು ದಂಡ ವಿಧಿಸಲಾಗಿದೆ. ಈ ಪಂದ್ಯದಲ್ಲಿ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರೊಂದಿಗೆ ಮೈದಾನದಲ್ಲೇ ವಾಗ್ವಾದ ನಡೆಸಿದ್ದರು. ಈ ತಪ್ಪಿಗಾಗಿ ಕೊಹ್ಲಿಗೆ 1.07 ಕೋಟಿ ರೂ. ದಂಡ ವಿಧಿಸಲಾಗಿದೆ.

5 / 7
ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಒಟ್ಟು 1 ಕೋಟಿ 43 ಲಕ್ಷ ರೂ. ದಂಡವಾಗಿ ಪಾವತಿಸಿದ್ದಾರೆ. ಅಚ್ಚರಿ ಎಂದರೆ ಇದು ಆರ್​ಸಿಬಿ ತಂಡದ ಕೆಲ ಆಟಗಾರರು ಪಡೆಯುವ ಸಂಭಾವನೆಗಿಂತ ಹೆಚ್ಚು.

6 / 7
ಆರ್​ಸಿಬಿ ಆಟಗಾರರಾದ ಮಹಿಪಾಲ್ ಲೋಮ್ರರ್ (95 ಲಕ್ಷ ರೂ.), ಸುಯಶ್ ಪ್ರಭುದೇಸಾಯಿ (30 ಲಕ್ಷ ರೂ.), ಕರ್ಣ್ ಶರ್ಮಾ (50 ಲಕ್ಷ ರೂ.), ಫಿನ್ ಅಲೆನ್ (80 ಲಕ್ಷ ರೂ.), ಸಿದ್ದಾರ್ಥ್ ಕೌಲ್ (75 ಲಕ್ಷ ರೂ.) ಸೇರಿದಂತೆ ಕೆಲ ಪ್ರಮುಖ ಆಟಗಾರರು ಪಡೆಯುವ ಮೊತ್ತಕ್ಕಿಂತಲೂ ಹೆಚ್ಚು ವಿರಾಟ್ ಕೊಹ್ಲಿ ದಂಡ ಪಾವತಿಸಿರುವುದು ವಿಶೇಷ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್