
IPL 2023: ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್ಸಿಬಿ ಜಯ ಸಾಧಿಸಿದೆ. ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಈ ಪಂದ್ಯದಲ್ಲಿ ಆರ್ಸಿಬಿ ತಂಡವು 8 ವಿಕೆಟ್ಗಳಿಂದ ಜಯಭೇರಿ ಬಾರಿಸಿತ್ತು. ಆದರೆ ಈ ಪಂದ್ಯದಲ್ಲಿ ಆರ್ಸಿಬಿ ಪರ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಕಣಕ್ಕಿಳಿದಿರಲಿಲ್ಲ.

ಇದೀಗ ಆರ್ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯಕ್ಕೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಲಂಕಾ ಸ್ಪಿನ್ನರ್ ಆರ್ಸಿಬಿ ತಂಡವನ್ನು ಸೇರಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ.

ಈ ಪ್ರಶ್ನೆಗೆ ಸದ್ಯದ ಉತ್ತರ ಏಪ್ರಿಲ್ 8 ರ ಬಳಿಕ. ಏಕೆಂದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯು ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು. ಇದಾದ ಬಳಿಕವಷ್ಟೇ ವನಿಂದು ಹಸರಂಗ ಭಾರತದತ್ತ ಪ್ರಯಾಣ ಬೆಳೆಸಲಿದ್ದಾರೆ.

ಅಂದರೆ ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಹಸರಂಗ ಲಭ್ಯರಿರಲಿದ್ದಾರೆ. ಆದರೆ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ಸಿಗಲಿದೆಯಾ ಎಂಬುದೇ ಪ್ರಶ್ನೆ.

ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಸ್ಪಿನ್ ಆಲ್ರೌಂಡರ್ ಆಗಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್ವೆಲ್ 2 ಓವರ್ನಲ್ಲಿ 16 ರನ್ ನೀಡಿ 1 ವಿಕೆಟ್ ಪಡೆದಿದ್ದರು.

ಅತ್ತ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಮೈಕೆಲ್ ಬ್ರೇಸ್ವೆಲ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಸರಂಗ ಅವರನ್ನು ಕಣಕ್ಕಿಳಿಸಲು ಬ್ರೇಸ್ವೆಲ್ ಅವರನ್ನು ಕೈ ಬಿಡಲಿದ್ದಾರಾ ಎಂಬುದೇ ಪ್ರಶ್ನೆ.

ಇದಾಗ್ಯೂ ಓರ್ವ ವಿದೇಶಿ ವೇಗದ ಬೌಲರ್ ಅನ್ನು ಕಡಿತಗೊಳಿಸಿದರೂ ಹಸರಂಗಗೆ ಚಾನ್ಸ್ ನೀಡಬಹುದು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ಲೇಯಿಂಗ್ ಇಲೆವೆನ್ನಲ್ಲಿ ಆರ್ಸಿಬಿ ಬದಲಾವಣೆ ಮಾಡಲಿದೆಯಾ ಕಾದು ನೋಡಬೇಕಿದೆ.