IPL 2023: ದೇವ್​ದತ್​ ಪಡಿಕ್ಕಲ್​ನ ಆಡುವ ಬಳಗದಿಂದ ಕೈಬಿಟ್ಟ ರಾಜಸ್ಥಾನ್ ರಾಯಲ್ಸ್..!

Devdutt Padikkal IPL Stats: ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಯುವ ಬ್ಯಾಟರ್ ಧ್ರುವ್ ಜುರೇಲ್ ಕೇವಲ 15 ಎಸೆತಗಳಲ್ಲಿ 32 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 08, 2023 | 8:30 PM

IPL 2023: ಗುವಾಹಟಿ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ರಾಯಲ್ಸ್ ಪರ ಸ್ಟಾರ್ ಆಟಗಾರ ದೇವ್​ದತ್ ಪಡಿಕ್ಕಲ್ ಕಾಣಿಸಿಕೊಂಡಿರಲಿಲ್ಲ.

1 / 9
ಅಂದರೆ ರಾಜಸ್ಥಾನ್ ರಾಯಲ್ಸ್ ತಂಡವು ದೇವ್​ದತ್ ಪಡಿಕ್ಕಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಟ್ಟಿದ್ದರು. ಈ ಬಗ್ಗೆ ಮಾತನಾಡಿದ ಆರ್​ಆರ್​ ತಂಡದ ನಾಯಕ ಸಂಜು ಸ್ಯಾಮ್ಸನ್​ ಮಧ್ಯಮ ಕ್ರಮಾಂಕವನ್ನು ಬಲಪಡಿಸುವ ಸಲುವಾಗಿ ತಂಡದಲ್ಲಿ ಬದಲಾವಣೆ ತರಲಾಗಿದೆ ಎಂದು ತಿಳಿಸಿದ್ದಾರೆ.

2 / 9
ಇದಕ್ಕೆ ಮುಖ್ಯ ಕಾರಣ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಎಂದರೆ ತಪ್ಪಾಗಲಾರದು. ಏಕೆಂದರೆ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 5 ರನ್​ಗಳಿಂದ ಸೋಲನುಭವಿಸಿತ್ತು. ಇದಕ್ಕೆ ಒಂದು ಕಾರಣ 5ನೇ ಕ್ರಮಾಂಕದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ದೇವ್​ದತ್ ಪಡಿಕ್ಕಲ್.

3 / 9
ಪಡಿಕ್ಕಲ್ ಪಂಜಾಬ್ ಕಿಂಗ್ಸ್ ವಿರುದ್ಧ 26 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ ಕೇವಲ 21 ರನ್​ಗಳಿಸಿದ್ದರು. ಈ ವೇಳೆ ಕೇವಲ 1 ಫೋರ್ ಮಾತ್ರ ಬಾರಿಸಿದ್ದರು. ಅತ್ತ 198 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಪಡಿಕ್ಕಲ್ ಅವರ ನಿಧಾನಗತಿಯ ಬ್ಯಾಟಿಂಗ್ ಮುಳುವಾಯಿತು.

4 / 9
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಯುವ ಬ್ಯಾಟರ್ ಧ್ರುವ್ ಜುರೇಲ್ ಕೇವಲ 15 ಎಸೆತಗಳಲ್ಲಿ 32 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು.

5 / 9
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ದೇವ್​ದತ್ ಪಡಿಕ್ಕಲ್ ಅವರನ್ನು ತಂಡದಿಂದ ಕೈ ಬಿಟ್ಟು ಧ್ರುವ್ ಜುರೇಲ್​ಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಚಾನ್ಸ್ ನೀಡಲಾಗಿದೆ. ಅತ್ತ ಸಿಕ್ಕ ಅವಕಾಶದಲ್ಲಿ ಧ್ರುವ್ 3 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 8 ರನ್​ ಬಾರಿಸಿದ್ದಾರೆ.

6 / 9
ಅಂದಹಾಗೆ ಈ ಹಿಂದೆ ದೇವ್​ದತ್ ಪಡಿಕ್ಕಲ್ ಆರ್​ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಓಪನರ್ ಆಗಿದ್ದ ವೇಳೆಯು ಅವರ ನಿಧಾನಗತಿಯ ಬ್ಯಾಟಿಂಗ್ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದಕ್ಕೆ ಸಾಕ್ಷಿಯೇ ಅವರ ಅಂಕಿ ಅಂಶಗಳು.

7 / 9
ಐಪಿಎಲ್​ನಲ್ಲಿ 48 ಪಂದ್ಯಗಳನ್ನಾಡಿರುವ ದೇವ್​ದತ್ ಪಡಿಕ್ಕಲ್ 1044 ಎಸೆತಗಳಲ್ಲಿ ಕಲೆಹಾಕಿರುವುದು ಕೇವಲ 1283 ರನ್​ ಮಾತ್ರ. ಅಂದರೆ ಅವರ ಅವರೇಜ್ ಸ್ಕೋರ್ 27.3. ಇದಾಗ್ಯೂ ಕಳೆದ ಸೀಸನ್​ನಲ್ಲಿ ರಾಜಸ್ಥಾನ್ ರಾಯಲ್ಸ್ ದೇವ್​ದತ್ ಪಡಿಕ್ಕಲ್​ಗೆ ಸತತ ಅವಕಾಶ ನೀಡಿತ್ತು.

8 / 9
ಈ ಬಾರಿ ಕೂಡ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ನೀಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 5 ಎಸೆತಗಳಲ್ಲಿ 2 ರನ್​ ಗಳಿಸಿದರೆ, 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 26 ಎಸೆತಗಳಲ್ಲಿ ಕೇವಲ 21 ರನ್​ ಕಲೆಹಾಕಿದ್ದಾರೆ. ಈ ಕಳಪೆ ಬ್ಯಾಟಿಂಗ್ ಪರಿಣಾಮ ಇದೀಗ ಪ್ಲೇಯಿಂಗ್ ಇಲೆವೆನ್​ನಿಂದಲೇ ದೇವ್​ದತ್ ಪಡಿಕ್ಕಲ್ ಹೊರಬಿದ್ದಿದ್ದಾರೆ.

9 / 9
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ