AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಾಯಕರುಗಳ ಫೋಟೋಶೂಟ್​ನಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳದಿರಲು ಇದುವೇ ಕಾರಣ..!

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಇಂದಿನಿಂದ (ಮಾ.31) ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 31, 2023 | 5:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ ಹೊಸ ಸೀಸನ್ ರಂಗೇರಲು ಇನ್ನೇನು ಗಂಟೆಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ತಂಡಗಳ ನಾಯಕರುಗಳು ಈಗಾಗಲೇ ಉದ್ಘಾಟನಾ ಸಮಾರಂಭಕ್ಕಾಗಿ ಅಹಮದಾಬಾದ್​ಗೆ ಬಂದಿಳಿದಿದ್ದಾರೆ. ಅಷ್ಟೇ ಅಲ್ಲದೆ ಐಪಿಎಲ್​ ಟ್ರೋಫಿಯೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

1 / 7
ಆದರೆ ಐಪಿಎಲ್ ಟ್ರೋಫಿಯೊಂದಿಗಿನ ನಾಯಕರುಗಳ ಫೋಟೋಶೂಟ್​ಗೆ ಮುಂಬೈ ಇಂಡಿಯನ್ಸ್​ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದರು. ಇದರ ಬೆನ್ನಲ್ಲೇ ಹಿಟ್​ಮ್ಯಾನ್ ಕಾಣಿಸಿಕೊಳ್ಳದಿರುವ ಬಗ್ಗೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿತ್ತು. ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಿದೆ.

2 / 7
ಗುರುವಾರ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ರೋಹಿತ್ ಶರ್ಮಾ ಆಗಮಿಸಿರಲಿಲ್ಲ. ಅನಾರೋಗ್ಯದ ಹಿನ್ನಲೆ ಹಿಟ್​ಮ್ಯಾನ್​ಗೆ ಅಹಮದಾಬಾದ್​ನತ್ತ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಉಳಿದ 9 ನಾಯಕರುಗಳ ಜೊತೆ ಫೋಟೋಶೂಟ್ ಮಾಡಲಾಗಿದೆ.

3 / 7
ಸದ್ಯ ರೋಹಿತ್ ಶರ್ಮಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದ್ದು, ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

4 / 7
ಇನ್ನು ಈ ಫೋಟೋ ಶೂಟ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕನ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್ ಕಾಣಿಸಿಕೊಂಡಿದ್ದರು. ಎಸ್​ಆರ್​ಹೆಚ್​ ತಂಡದ ಹೊಸ ನಾಯಕ ಐಡೆನ್ ಮಾರ್ಕ್ರಾಮ್ ಸೌತ್ ಆಫ್ರಿಕಾ ಹಾಗೂ ನೆದರ್​ಲ್ಯಾಂಡ್ಸ್ ನಡುವಣ ಏಕದಿನ ಸರಣಿ ಆಡುತ್ತಿದ್ದಾರೆ. ಹೀಗಾಗಿ ಅವರು ಸಹ ಐಪಿಎಲ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಗಮಿಸಲು ಸಾಧ್ಯವಾಗಿಲ್ಲ.

5 / 7
ಅಲ್ಲದೆ ಏಪ್ರಿಲ್ 2 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಐಡೆನ್ ಮಾರ್ಕ್ರಾಮ್ ಅಲಭ್ಯರಾಗಿದ್ದಾರೆ. ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಹಂಗಾಮಿ ನಾಯಕನಾಗಿ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಇದೇ ಕಾರಣದಿಂದಾಗಿ ಭುವಿ ಐಪಿಎಲ್ ಕ್ಯಾಪ್ಟನ್ಸ್​ ಫೋಟೋಶೂಟ್​ನಲ್ಲಿ ಕಾಣಿಸಿಕೊಂಡಿದ್ದರು.

6 / 7
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಇಂದಿನಿಂದ (ಮಾ.31) ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

7 / 7