AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: SRH ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಅಭಿಷೇಕ್ ಶರ್ಮಾ..!

IPL 2024, Abhishek Sharma: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 23 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್​ಗಳ ಸಹಿತ 63 ರನ್ ಕಲೆಹಾಕಿದರು. ಹಾಗೆಯೇ ಹೈದರಾಬಾದ್‌ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಎಂಬ ದಾಖಲೆ ಕೂಡ ಬರೆದರು.

ಪೃಥ್ವಿಶಂಕರ
|

Updated on:Mar 27, 2024 | 9:18 PM

Share
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 8ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಹೈದರಾಬಾದ್ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

1 / 6
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿ, ಹೈದರಾಬಾದ್‌ ತಂಡದ ಪರ ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಪುಡಿಗಟ್ಟಿದ್ದರು.

2 / 6
ತಮ್ಮ ಇನ್ನಿಂಗ್ಸ್​ನಲ್ಲಿ 24 ಎಸೆತಗಳನ್ನು ಎದುರಿಸಿದ್ದ ಹೆಡ್ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 62 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇವರ ಸ್ಫೋಟಕ ಆಟದಿಂದಾಗಿ ಎಸ್​ಆರ್​ಹೆಚ್ ತಂಡ ತನ್ನ ಐಪಿಎಲ್ ಇತಿಹಾಸದಲ್ಲಿ ಪವರ್ ಪ್ಲೇನಲ್ಲಿ ಅತಿ ದೊಡ್ಡ ರನ್ ಕಲೆಹಾಕಿದ ದಾಖಲೆ ಬರೆಯಿತು.

3 / 6
ಆದರೆ ಕೆಲವೇ ಕೆಲವು ನಿಮಿಷಗಳ ಅಂತರದಲ್ಲಿ ಟ್ರಾವಿಸ್ ಹೆಡ್ ನಿರ್ಮಿಸಿದ್ದ ಅತಿ ವೇಗದ ಅರ್ಧಶತಕದ ದಾಖಲೆಯನ್ನು ಮೂರನೇ ಕ್ರಮಾಂಕದಲ್ಲಿ ಬಂದ ಅಭಿಷೇಕ್ ಶರ್ಮಾ ಮುರಿದರು. ಅಭಿಷೇಕ್ ಶರ್ಮಾ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

4 / 6
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 23 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್​ಗಳ ಸಹಿತ 63 ರನ್ ಕಲೆಹಾಕಿದರು. ಹಾಗೆಯೇ ಹೈದರಾಬಾದ್‌ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಎಂಬ ದಾಖಲೆ ಕೂಡ ಬರೆದರು.

5 / 6
ಇವರಿಬ್ಬರಿಗೂ ಮುನ್ನ 2015 ಹಾಗೂ 2017 ರಲ್ಲಿ ಡೇವಿಡ್ ವಾರ್ನರ್ ಸಿಎಸ್​ಕೆ ಹಾಗೂ ಕೆಕೆಆರ್ ವಿರುದ್ಧ ತಲಾ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಹೈದರಾಬಾದ್‌ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದರು.

6 / 6

Published On - 9:17 pm, Wed, 27 March 24

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್