IPL 2024: SRH ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಅಭಿಷೇಕ್ ಶರ್ಮಾ..!
IPL 2024, Abhishek Sharma: ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 23 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ಗಳ ಸಹಿತ 63 ರನ್ ಕಲೆಹಾಕಿದರು. ಹಾಗೆಯೇ ಹೈದರಾಬಾದ್ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಎಂಬ ದಾಖಲೆ ಕೂಡ ಬರೆದರು.
1 / 6
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 8ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಹೈದರಾಬಾದ್ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.
2 / 6
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಟ್ರಾವಿಸ್ ಹೆಡ್ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿ, ಹೈದರಾಬಾದ್ ತಂಡದ ಪರ ಅತಿ ವೇಗದ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಪುಡಿಗಟ್ಟಿದ್ದರು.
3 / 6
ತಮ್ಮ ಇನ್ನಿಂಗ್ಸ್ನಲ್ಲಿ 24 ಎಸೆತಗಳನ್ನು ಎದುರಿಸಿದ್ದ ಹೆಡ್ 9 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 62 ರನ್ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇವರ ಸ್ಫೋಟಕ ಆಟದಿಂದಾಗಿ ಎಸ್ಆರ್ಹೆಚ್ ತಂಡ ತನ್ನ ಐಪಿಎಲ್ ಇತಿಹಾಸದಲ್ಲಿ ಪವರ್ ಪ್ಲೇನಲ್ಲಿ ಅತಿ ದೊಡ್ಡ ರನ್ ಕಲೆಹಾಕಿದ ದಾಖಲೆ ಬರೆಯಿತು.
4 / 6
ಆದರೆ ಕೆಲವೇ ಕೆಲವು ನಿಮಿಷಗಳ ಅಂತರದಲ್ಲಿ ಟ್ರಾವಿಸ್ ಹೆಡ್ ನಿರ್ಮಿಸಿದ್ದ ಅತಿ ವೇಗದ ಅರ್ಧಶತಕದ ದಾಖಲೆಯನ್ನು ಮೂರನೇ ಕ್ರಮಾಂಕದಲ್ಲಿ ಬಂದ ಅಭಿಷೇಕ್ ಶರ್ಮಾ ಮುರಿದರು. ಅಭಿಷೇಕ್ ಶರ್ಮಾ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
5 / 6
ತಮ್ಮ ಇನ್ನಿಂಗ್ಸ್ನಲ್ಲಿ ಕೇವಲ 23 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ 3 ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್ಗಳ ಸಹಿತ 63 ರನ್ ಕಲೆಹಾಕಿದರು. ಹಾಗೆಯೇ ಹೈದರಾಬಾದ್ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಎಂಬ ದಾಖಲೆ ಕೂಡ ಬರೆದರು.
6 / 6
ಇವರಿಬ್ಬರಿಗೂ ಮುನ್ನ 2015 ಹಾಗೂ 2017 ರಲ್ಲಿ ಡೇವಿಡ್ ವಾರ್ನರ್ ಸಿಎಸ್ಕೆ ಹಾಗೂ ಕೆಕೆಆರ್ ವಿರುದ್ಧ ತಲಾ 20 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಹೈದರಾಬಾದ್ ಪರ ಅತಿ ವೇಗದ ಅರ್ಧಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದರು.
Published On - 9:17 pm, Wed, 27 March 24