AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 25 ಎಸೆತ, 7 ಸಿಕ್ಸರ್, 64 ರನ್..! ರಸೆಲ್ ರೌದ್ರಾವತಾರ

IPL 2024: ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಪೃಥ್ವಿಶಂಕರ
|

Updated on: Mar 23, 2024 | 9:48 PM

Share
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 3ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 208 ರನ್ ಕಲೆಹಾಕಿದೆ.

1 / 7
ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆಲ್​ರೌಂಡರ್ ಆಂಡ್ರೆ ರಸೆಲ್ ಕೆಳಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಒಂದು ಹಂತದಲ್ಲಿ ಕೆಕೆಆರ್ ತಂಡ 119 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

2 / 7
ಅಲ್ಲಿಂದ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತ ರಸೆಲ್ ಹಾಗೂ ರಿಂಕು ಸಿಂಗ್ ಹೈದರಾಬಾದ್ ಬೌಲರ್​ಗಳ ಚೆಂಡಾಡಿದರು. ಈ ವೇಳೆ ರಿಂಕು ಸಿಂಗ್ 15 ಎಸೆತಗಳಲ್ಲಿ 3 ಬೌಂಡರಿ ಸಹಿತ 23 ರನ್ ಬಾರಿಸಿದರೆ, ರಸೆಲ್ ಮಾತ್ರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದರು.

3 / 7
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 25 ಎಸೆತಗಳನ್ನು ಎದುರಿಸಿದ ರಸೆಲ್, 7 ಭರ್ಜರಿ ಸಿಕ್ಸರ್ ಹಾಗೂ 3 ಬೌಂಡರಿಗಳ ಸಹಿತ ಅಜೇಯ 64 ರನ್​​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

4 / 7
ಅದರಲ್ಲೂ ಕೊನೆಯ 5 ಓವರ್​ಗಳಲ್ಲಿ ತಂಡಕ್ಕೆ ಬರೋಬ್ಬರಿ 78 ರನ್​ಗಳು ಹರಿದುಬಂದವು. ರಸೆಲ್ ಅವರ ಅಬ್ಬರ ಹೇಗಿತ್ತು ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿ. ಕೊನೆಯ ಐದು ಓವರ್​ಗಳಲ್ಲಿ ರಸೆಲ್- ರಿಂಕು ಜೋಡಿ ಬೌಂಡರಿ ಸಿಕ್ಸರ್​ಗಳ ಮಳೆಗರೆಯಿತು.

5 / 7
ಮಯಾಂಕ್ ಮಾರ್ಕಂಡೆ ಬೌಲ್ ಮಾಡಿದ 16ನೇ ಓವರ್​ನಲ್ಲಿ 3 ಸಿಕ್ಸರ್ ಸಿಡಿಸಿದ ರಸೆಲ್, ಆ ನಂತರ ಭುವನೇಶ್ವರ್ ಕುಮಾರ್ ಎಸೆದ 17ನೇ ಓವರ್​ನಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಿಡಿಸಿದರು. ಇದೇ ಓವರ್​ನಲ್ಲಿ ರಿಂಕು ಕೂಡ ಸಿಕ್ಸರ್ ಸಿಡಿಸಿದರು.

6 / 7
18 ಮತ್ತು 19ನೇ ಓವರ್​ನಲ್ಲಿ ತಲಾ 2 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿದವು. ಆದರೆ 20ನೇ ಓವರ್ ಬೌಲ್ ಮಾಡಿದ ಟಿ ನಟರಾಜನ್ ರಸೆಲ್ ಅಬ್ಬರಕ್ಕೆ ಕಡಿವಾಣ ಹಾಕಿ ಕೊನೆಯ ಓವರ್​ನಲ್ಲಿ ಕೇವಲ 8 ರನ್ ಬಿಟ್ಟುಕೊಟ್ಟರು.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್