ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಹರಾಜಿನಲ್ಲಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಅವರನ್ನು ದಾಖಲೆಯ ಮೊತ್ತಕ್ಕೆ ಖರೀದಿಸಿದೆ.
2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕಮಿನ್ಸ್ ಖರೀದಿಗಾಗಿ ಸನ್ರೈಸರ್ಸ್ ಹೈದರಾಬಾದ್ ಹಾಗೂ ಆರ್ಸಿಬಿ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಪರಿಣಾಮ ಕ್ಷಣಾರ್ಧದಲ್ಲೇ ಕಮಿನ್ಸ್ ಮೌಲ್ಯ 15 ಕೋಟಿ ರೂ. ದಾಟಿತು.
ಅಂತಿಮವಾಗಿ 20.50 ಕೋಟಿ ರೂ. ನೀಡಿ ಪ್ಯಾಟ್ ಕಮಿನ್ಸ್ ಅವರನ್ನು ಖರೀದಿಸುವಲ್ಲಿ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಯಶಸ್ವಿಯಾಗಿದೆ. ಇದು ಐಪಿಎಲ್ ಇತಿಹಾಸದಲ್ಲೇ ಆಟಗಾರನೊಬ್ಬನಿಗೆ ಸಿಕ್ಕ ದೊಡ್ಡ ಸಂಭಾವನೆ.
ಇದಕ್ಕೂ ಮುನ್ನ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತಕ್ಕೆ ಹರಾಜಾದ ದಾಖಲೆ ಸ್ಯಾಮ್ ಕರನ್ ಹೆಸರಿನಲ್ಲಿತ್ತು. 2023 ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸ್ಯಾಮ್ ಕರನ್ ಅವರನ್ನು 18.50 ಕೋಟಿ ರೂ.ಗೆ ಖರೀದಿಸಿತ್ತು.
ಇದೀಗ ಪ್ಯಾಟ್ ಕಮಿನ್ಸ್ಗೆ 20.50 ಕೋಟಿ ರೂ. ನೀಡುವ ಮೂಲಕ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಆಸ್ಟ್ರೇಲಿಯಾ ಆಟಗಾರ ಕಮಿನ್ಸ್ ಐಪಿಎಲ್ನ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ.
ಸನ್ರೈಸರ್ಸ್ ಹೈದರಾಬಾದ್ ತಂಡ: ಐಡೆನ್ ಮಾರ್ಕ್ರಾಮ್, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಸಂವಿರ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಹುಲ್ ತ್ರಿಪಾಠಿ, ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್‌ಪ್ರೀತ್ ಸಿಂಗ್, ಗ್ಲೆನ್ ಫಿಲಿಪ್ಸ್, ಫಝಲ್‌ಹಕ್ ಫಾರೂಕಿ, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಹೆನ್ರಿಕ್ ಕ್ಲಾಸೆನ್, ಉಪೇಂದ್ರ ಸಿಂಗ್ ಯಾದವ್, ಪ್ಯಾಟ್ ಕಮಿನ್ಸ್.
Published On - 2:17 pm, Tue, 19 December 23