IPL 2024 Auction: ಇಂಗ್ಲೆಂಡ್ ಆಲ್ರೌಂಡರ್ನ ಖರೀದಿಸಿದ RCB
TV9 Web | Updated By: ಝಾಹಿರ್ ಯೂಸುಫ್
Updated on:
Dec 19, 2023 | 7:37 PM
IPL 2024 Auction: ಈ ಬಾರಿಯ ಹರಾಜಿಗೂ ಮುನ್ನ ಆರ್ಸಿಬಿ ತಂಡವು ಒಟ್ಟು 19 ಆಟಗಾರರನ್ನು ಉಳಿಸಿಕೊಂಡಿತ್ತು. ಅದರಂತೆ ಹರಾಜಿನ ಮೂಲಕ 6 ಆಟಗಾರರನ್ನು ಖರೀದಿಸುವ ಅವಕಾಶವಿದೆ. ಇದೀಗ ಆರ್ಸಿಬಿ 3 ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದು, ಇನ್ನು ಮೂವರನ್ನು ಖರೀದಿಸಲು ಅವಕಾಶವಿದೆ.
1 / 5
ಐಪಿಎಲ್ ಸೀಸನ್ 17 ಹರಾಜಿನ ಮೂಲಕ ಆರ್ಸಿಬಿ ಮೂರನೇ ಆಟಗಾರನನ್ನು ಖರೀದಿಸಿದೆ. ಈ ಬಾರಿ ಆರ್ಸಿಬಿ ಫ್ರಾಂಚೈಸಿ ಖರೀದಿಸಿರುವುದು ಇಂಗ್ಲೆಂಡ್ನ ಆಲ್ರೌಂಡರ್ ಟಾಮ್ ಕರನ್ ಅವರನ್ನು ಎಂಬುದು ವಿಶೇಷ.
2 / 5
ಇಂಗ್ಲೆಂಡ್ ಪರ 30 ಟಿ20 ಪಂದ್ಯಗಳನ್ನಾಡಿರುವ ಟಾಮ್ ಕರನ್ 29 ವಿಕೆಟ್ಗಳನ್ನು ಕಬಳಿಸಿದ್ದಾರೆ. ಹಾಗೆಯೇ 13 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿ 64 ರನ್ ಕಲೆಹಾಕಿದ್ದಾರೆ.
3 / 5
ಹಾಗೆಯೇ ಐಪಿಎಲ್ನಲ್ಲಿ ಕೆಕೆಆರ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಟಾಮ್ ಕರನ್ 127 ರನ್ ಬಾರಿಸಿದ್ದಾರೆ. ಹಾಗೆಯೇ 13 ವಿಕೆಟ್ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
4 / 5
ಅದರಂತೆ ಈ ಬಾರಿಯ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಟಾಮ್ ಕರನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೇಸ್ ಪ್ರೈಸ್ಗೆ ಖರೀದಿಸುವಲ್ಲಿ ಯಶಸ್ವಿಯಾಗಿದೆ.
5 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.
Published On - 7:35 pm, Tue, 19 December 23