AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂತ್ ಔಟ್! ಆರ್​ಸಿಬಿ ವಿರುದ್ಧ ಡೆಲ್ಲಿ ತಂಡಕ್ಕೆ ಸ್ಪಿನ್ ಆಲ್​ರೌಂಡರ್ ನಾಯಕ

IPL 2024: ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಆದರೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ತಂಡದ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್, ಪಂತ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಖ್ಯ ಕೋಚ್ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: May 11, 2024 | 8:15 PM

Share
ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇದೇ ಭಾನುವಾರ ಜಿದ್ದಾಜಿದ್ದಿನ ಹೋರಾಟ ನಡೆಯಲ್ಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಅಶುಭ ಸುದ್ದಿ ಸಿಕ್ಕಿದ್ದು ತಂಡದ ನಾಯಕ ರಿಷಬ್ ಪಂತ್ ಶಿಕ್ಷೆಯ ರೂಪದಲ್ಲಿ ಒಂದು ಪಂದ್ಯದಿಂದ ಹೊರಗುಳಿಯಬೇಕಾಗಿದೆ.

1 / 6
ವಾಸ್ತವವಾಗಿ ನಿಧಾನಗತಿಯ ಓವರ್ ರೇಟ್‌ ನಿಯಮ ಉಲ್ಲಂಘಿಸಿದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ಹೊರಗುಳಿಯಬೇಕಾಗಿದೆ. ಅದರ ಪ್ರಕಾರ ನಾಳೆ ನಡೆಯಲ್ಲಿರುವ ಆರ್​ಸಿಬಿ ವಿರುದ್ಧದ ಬಹುಮುಖ್ಯ ಪಂದ್ಯಕ್ಕೆ ರಿಷಬ್ ಪಂತ್ ಅಲಭ್ಯರಾಗಿದ್ದಾರೆ.

2 / 6
ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವುದು ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿತ್ತು. ಆದರೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ತಂಡದ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್, ಪಂತ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಮುಖ್ಯ ಕೋಚ್ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.

3 / 6
ಕಳೆದ ಪಂದ್ಯದಲ್ಲಿ ಅಂದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ನ ಕೊನೆಯ ಪಂದ್ಯದಲ್ಲಿ ನಿಧಾನಗತಿಯ ಓವರಿಗಾಗಿ ಪಂತ್ ಅವರನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಲಾಗಿದ್ದು, 30 ಲಕ್ಷ ರೂ. ದಂಡವನ್ನು ಸಹ ವಿಧಿಸಲಾಗಿದೆ.

4 / 6
ಇನ್ನು ನಾಳಿನ ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯ ಎರಡೂ ತಂಡಗಳಿಗೂ ಬಹುಮುಖ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತ ತಂಡಕ್ಕೆ ಪ್ಲೇಆಫ್‌ ಹಾದಿ ಮುಚ್ಚಲಿದೆ. ಅದರಲ್ಲೂ ಆರ್​ಸಿಬಿ ತಂಡಕ್ಕೆ ಈ ಪಂದ್ಯದ ಗೆಲುವು ಬಹಳ ಅವಶ್ಯಕವಾಗಿದೆ.

5 / 6
ಇದುವರೆಗೆ ಆರ್​ಸಿಬಿ ಆಡಿರುವ 12 ಪಂದ್ಯಗಳಲ್ಲಿ 5 ರಲ್ಲಿ ಗೆದ್ದು, 10 ಅಂಕ ಸಂಪಾದಿಸಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಪಂದ್ಯಗಳನ್ನು ಗೆದ್ದು 12 ಅಂಕಗಳನ್ನು ಖಾತೆಗೆ ಹಾಕಿಕೊಂಡಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ 12 ಅಂಕಗಳೊಂದಿಗೆ 7ನೇ ಸ್ಥಾನದಿಂದ ನೇರವಾಗಿ 5ನೇ ಸ್ಥಾನಕ್ಕೆ ಬರಲಿದೆ.

6 / 6
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ