IPL 2024: ಸಿಎಸ್​ಕೆ ತೊರೆಯಲ್ಲಿದ್ದಾರೆ ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್..!

IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಲೀಗ್ ಮಧ್ಯದಲ್ಲೇ ತಮ್ಮ ದೇಶಕ್ಕೆ ವಾಪಸ್ಸಾಗಲಿದ್ದಾರೆ. ಚೆನ್ನೈ ಪರ ಡೆತ್ ಓವರ್​ಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡುತ್ತಿರುವ ವೇಗಿ ಮುಸ್ತಾಫಿಜುರ್ ರೆಹಮಾನ್ ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Apr 17, 2024 | 5:20 PM

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸಮತೋಲಿತ ಪ್ರದರ್ಶನ ನೀಡುತ್ತಿರುವ ತಂಡವೆಂದರೆ ಅದು ಸಿಎಸ್​ಕೆ. ರುತುರಾಜ್ ನಾಯಕತ್ವದ ಚೆನ್ನೈ ತಂಡ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದೆ.

1 / 8
ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು 4ರಲ್ಲಿ ಜಯ ಸಾಧಿಸಿದ್ದು, ಉಳಿದಂತೆ 2ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಒಟ್ಟಾರೆ 8 ಅಂಕಗಳೊಂದಿಗೆ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಲೀಗ್ ಮಧ್ಯದಲ್ಲೇ ತಮ್ಮ ದೇಶಕ್ಕೆ ವಾಪಸ್ಸಾಗಲಿದ್ದಾರೆ.

2 / 8
ಚೆನ್ನೈ ಪರ ಡೆತ್ ಓವರ್​ಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡುತ್ತಿರುವ ವೇಗಿ ಮುಸ್ತಾಫಿಜುರ್ ರೆಹಮಾನ್ ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

3 / 8
ಹೀಗಾಗಿ ಮುಸ್ತಾಫಿಜುರ್ ರೆಹಮಾನ್ ದೇಶದ ಪರ ಆಡುವ ಸಲುವಾಗಿ ಐಪಿಎಲ್ ತೊರೆಯಲ್ಲಿದ್ದಾರೆ. ಅಲ್ಲದೆ ಈ ಸರಣಿ ಮುಗಿದ ನಂತರವೂ ರೆಹಮಾನ್ ಮತ್ತೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಆ ಬಳಿಕವೂ ಬಾಂಗ್ಲಾ ತಂಡ ಟಿ20 ವಿಶ್ವಕಪ್‌ಗೂ ಮುನ್ನ ಅಮೆರಿಕ ವಿರುದ್ಧ ಮೂರು ಟಿ20 ಪಂದ್ಯಗಳನ್ನು ಆಡಲಿದೆ.

4 / 8
ಮೇ 21ರಿಂದ ಈ ಸರಣಿ ಆರಂಭವಾಗಲಿರುವುದರಿಂದ ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಈ ಸರಣಿ ಆರಂಭವಾದ ಐದು ದಿನಗಳಲ್ಲಿ ಐಪಿಎಲ್ 2024 ರ ಫೈನಲ್ ಪಂದ್ಯ ನಡೆಯಲ್ಲಿದೆ.

5 / 8
ಈ ಹಿಂದೆಯೇ ಅಂದರೆ ರೆಹಮಾನ್ ಏಪ್ರಿಲ್ 30 ರಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಆದರೆ, ಸಿಎಸ್​ಕೆ ಕೋರಿಕೆಯ ನಂತರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ರೆಹಮಾನ್ ಅವರಿಗೆ 1 ದಿನದ ಎನ್​ಒಸಿ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಏಪ್ರಿಲ್ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ.

6 / 8
ರೆಹಮಾನ್ ಈಗ ಏಪ್ರಿಲ್ 19 ಮತ್ತು 23 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ, ಏಪ್ರಿಲ್ 28 ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮತ್ತು ಮೇ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯಗಳನ್ನು ಆಡಲಿದ್ದಾರೆ. ಇದರ ನಂತರ ಅವರು ತಮ್ಮ ದೇಶಕ್ಕೆ ಹಿಂತಿರುಗುತ್ತಾರೆ.

7 / 8
ಐಪಿಎಲ್ 2024 ರಲ್ಲಿ ಮುಸ್ತಾಫಿಜುರ್ ರೆಹಮಾನ್ ಇಲ್ಲಿಯವರೆಗೆ ಆಡಿದ 5 ಪಂದ್ಯಗಳಲ್ಲಿ 18.30 ರ ಸರಾಸರಿಯಲ್ಲಿ ಮತ್ತು 9.15 ರ ಎಕಾನಮಿಯಲ್ಲಿ 10 ವಿಕೆಟ್ಗಳನ್ನು ಪಡೆದಿದ್ದಾರೆ.

8 / 8
Follow us
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್

ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ

ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು

ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ

ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು

ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ

ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ