- Kannada News Photo gallery Cricket photos IPL 2024 CSK vs RCB Head to Head record, stats details in kannada
IPL 2024: ಆರ್ಸಿಬಿ- ಸಿಎಸ್ಕೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ..?
CSK vs RCB Head to Head Record: ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.
Updated on: Feb 22, 2024 | 8:17 PM

ಐಪಿಎಲ್ 17ನೇ ಆವೃತ್ತಿ ಮುಂದಿನ ತಿಂಗಳು ಮಾರ್ಚ್ 22ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ 32ನೇ ಕದನ ಇದಾಗಿದ್ದು, ಈ ಹಿಂದೆ ನಡೆದ ಪಂದ್ಯಗಳಲ್ಲಿ ಯಾರದ್ದು ಮೇಲುಗೈ ಎಂಬುದನ್ನು ನೋಡುವುದಾದರೆ..

ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಕಾಳಗಕ್ಕೆ ಪ್ರತ್ಯೇಕ ಅಭಿಮಾನಿಗಳ ಬಳಗವೇ ಇದೆ. ಉಭಯ ತಂಡಗಳು ಮುಖಾಮುಖಿಯಾದಾಗಲೆಲ್ಲ ಇಡೀ ಮೈದಾನವೇ ಅಭಿಮಾನಿಗಳಿಂದ ತುಂಬಿ ತುಳುಕುತ್ತಿರುತ್ತದೆ.

ಹಾಗೆಯೇ ಎರಡೂ ತಂಡಗಳ ಆಟಗಾರರು ಸಹ ಗೆಲುವಿಗಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡುವುದನ್ನು ನಾವು ನೋಡಿದ್ದೇವೆ. ಇದೀಗ ಐಪಿಎಲ್ 2024 ರ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಲೀಗ್ಗೆ ಭರ್ಜರಿ ಆರಂಭ ದೊರುಕುವುದರಲ್ಲಿ ಅನುಮಾನವಿಲ್ಲ.

ಇನ್ನು ಐಪಿಎಲ್ ವೇದಿಕೆಯಲ್ಲಿ ಉಭಯ ತಂಡಗಳು ಇದುವರೆಗೆ 31 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮೇಲುಗೈ ಸಾಧಿಸಿರುವ ಸಿಎಸ್ಕೆ ತಂಡ 20 ಪಂದ್ಯಗಳನ್ನು ಗೆದ್ದಿದ್ದರೆ, ಆರ್ಸಿಬಿ ಕೇವಲ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

2024 ರಲ್ಲಿ ಉದ್ಘಾಟನಾ ಪಂದ್ಯವನ್ನಾಡುತ್ತಿರುವ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಇದುವರೆಗೆ 9 ಬಾರಿ ಮುಖಾಮುಖಿಯಾಗಿವೆ. ಇಲ್ಲೂ ಮೇಲುಗೈ ಸಾಧಿಸಿರುವ ಧೋನಿ ಪಡೆ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಆರ್ಸಿಬಿ ಕೇವಲ 1 ಪಂದ್ಯವನ್ನು ಜಯಿಸುವಲ್ಲಿ ಯಶಸ್ವಿಯಾಗಿದೆ.

ಆದರೆ ಪ್ರಸ್ತುತ ಚೆನ್ನೈ ತಂಡದಂತೆಯೇ ಬಲಿಷ್ಠವಾಗಿ ಕಾಣುತ್ತಿರುವ ಆರ್ಸಿಬಿ, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ನರನ್ನು ಮಣಿಸುವ ಇರಾದೆಯೊಂದಿಗೆ ಕಣಕ್ಕಿಳಿಯಲ್ಲಿದೆ. ಈ ಪಂದ್ಯ ಮಾರ್ಚ್ 22 ರ ಸಂಜೆ 7.30 ಕ್ಕೆ ಆರಂಭವಾಗಲಿದೆ.

ಆರ್ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಅನುಜ್ ರಾವತ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ಆಕಾಶ್ ದೀಪ್, ಮನೋಜ್ ಭಾಂಡಗೆ, ಟಾಮ್ ಕರನ್, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಸುಯಶ್ ಪ್ರಭುದೇಸಾಯಿ, ಮಯಾಂಕ್ ದಾಗರ್, ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ರೀಸ್ ಟೋಪ್ಲಿ, ವಿಜಯ್ ಕುಮಾರ್ ವೈಶಾಕ್, ಯಶ್ ದಯಾಳ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ) ಮೊಯಿನ್ ಅಲಿ, ದೀಪಕ್ ಚಾಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್ ಅರವಲ್ಲಿ.



















