AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ವಿರುದ್ಧದ ಪಂದ್ಯಕ್ಕೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಗೆ ಶುಕ್ರವಾರ ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ (IPL 2024) ಉದ್ಘಾಟನಾ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರು ಅಲಭ್ಯರಾಗಲಿದ್ದಾರೆ.

TV9 Web
| Edited By: |

Updated on: Mar 19, 2024 | 2:23 PM

Share
ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ರಂಗೇರಲು ಇನ್ನು ಕೇವಲ ದಿನಗಳು ಮಾತ್ರ ಬಾಕಿಯಿದೆ. ಮಾರ್ಚ್ 22 ರಿಂದ ಐಪಿಎಲ್​ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK)​ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಸಿಎಸ್​ಕೆ ತಂಡದ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

1 / 6
ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಕಾನ್ವೆ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಐಪಿಎಲ್​ನ ಮೊದಲಾರ್ಧದಲ್ಲಿ ಅವರು ಕಾಣಿಸಿಕೊಳ್ಳುವುದು ಅನುಮಾನ.

2 / 6
ಮತ್ತೊಂದೆಡೆ ಸಿಎಸ್​ಕೆ ತಂಡದ ವೇಗದ ಅಸ್ತ್ರವಾಗಿ ಗುರುತಿಸಿಕೊಂಡಿರುವ ಶ್ರೀಲಂಕಾ ವೇಗಿ ಮಥೀಶ ಪತಿರಾಣ ಕೂಡ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಪತಿರಾಣ ಕೂಡ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ.

3 / 6
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಡೆವೊನ್ ಕಾನ್ವೆ ಹಾಗೂ ಮಥೀಶ ಪತಿರಾಣ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಈ ಇಬ್ಬರು ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

4 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

5 / 6
ಚೆನ್ನೈ ಸೂಪರ್ ಕಿಂಗ್ಸ್ ತಂಡ​​: ಎಂಎಸ್ ಧೋನಿ (ನಾಯಕ), ಮೊಯೀನ್ ಅಲಿ, ದೀಪಕ್ ಚಹರ್, ಡೆವೊನ್ ಕಾನ್ವೇ, ತುಷಾರ್ ದೇಶಪಾಂಡೆ, ಶಿವಂ ದುಬೆ, ರುತುರಾಜ್ ಗಾಯಕ್ವಾಡ್, ರಾಜವರ್ಧನ್ ಹಂಗರ್ಗೇಕರ್, ರವೀಂದ್ರ ಜಡೇಜಾ, ಅಜಯ್ ಮಂಡಲ್, ಮುಖೇಶ್ ಚೌಧರಿ, ಮಥೀಶ ಪತಿರಾನಾ, ಅಜಿಂಕ್ಯ ರಹಾನೆ, ಶೇಕ್ ಸಿಂಘೆಲ್ ರಷೀದ್, ಎಂ. , ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರೆಹಮಾನ್, ಅವನೀಶ್ ರಾವ್, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡೇರಿಲ್ ಮಿಚೆಲ್, ಸಮೀರ್ ರಿಜ್ವಿ, ಅವನೀಶ್ ರಾವ್ ಅರವೆಲ್ಲಿ.

6 / 6