- Kannada News Photo gallery Cricket photos IPL 2024 David Warner equals Chris Gayle's most half-centuries world record in t20 format
IPL 2024: ವಾರ್ನರ್ ಸಿಡಿಲಬ್ಬರಕ್ಕೆ ಹಳೆಯ ದಾಖಲೆಗಳೆಲ್ಲ ಉಡೀಸ್..!
IPL 2024: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ನೀಡಿದಲ್ಲದೆ ಪ್ರಮುಖ ದಾಖಲೆಯನ್ನು ಬರೆದಿದ್ದಾರೆ.
Updated on: Mar 31, 2024 | 9:46 PM

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ನೀಡಿದಲ್ಲದೆ ಪ್ರಮುಖ ದಾಖಲೆಯನ್ನು ಬರೆದಿದ್ದಾರೆ.

ಇಂದಿನ ಪಂದ್ಯದಲ್ಲಿ ಆರಂಭಿಕರನ್ನು ಡೆಲ್ಲಿ ಬದಲಿಸಿತ್ತು. ಅದರಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ ತಂಡಕ್ಕೆ 93 ರನ್ಗಳ ಜೊತೆಯಾಟ ನೀಡಿದರು. ಈ ವೇಳೆ ವಾರ್ನರ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 6500 ರನ್ ಪೂರೈಸಿದ ದಾಖಲೆ ಕೂಡ ನಿರ್ಮಿಸಿದರು.

ಮೊದಲ 4 ಓವರ್‌ಗಳಲ್ಲಿ ವಾರ್ನರ್ ಮತ್ತು ಶಾ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದರು. ಇದಾದ ಬಳಿಕ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಗೇರ್ ಬದಲಿಸಿ ಸಿಎಸ್‌ಕೆ ಬೌಲರ್‌ಗಳನ್ನು ಪುಡಿಪುಡಿ ಮಾಡಿದರು. ಪಂದ್ಯದಲ್ಲಿ 25 ರನ್ ಗಳಿಸಿದ ನಂತರ, ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ 6500 ರನ್ ಪೂರೈಸಿದರು.

ಈ ಮೂಲಕ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ನಂತರ ಐಪಿಎಲ್‌ನಲ್ಲಿ 6500 ರನ್ ಪೂರೈಸಿದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ 240 ಪಂದ್ಯಗಳ 232 ಇನ್ನಿಂಗ್ಸ್‌ಗಳಲ್ಲಿ 7444 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಶಿಖರ್ ಧವನ್ 220 ಪಂದ್ಯಗಳ 219 ಇನ್ನಿಂಗ್ಸ್‌ಗಳಲ್ಲಿ 6754 ರನ್ ಗಳಿಸಿದ್ದಾರೆ.

ಇದಲ್ಲದೆ ಈ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ವಾರ್ನರ್ಗೆ ಟಿ20 ಮಾದರಿಯಲ್ಲಿ ಇದು 110ನೇ ಅರ್ಧಶತಕವಾಗಿತ್ತು. ಈ ಮೂಲಕ ವಾರ್ನರ್ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ವಾರ್ನರ್ಗೂ ಮುನ್ನ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಗೇಲ್ ಟಿ20 ಮಾದರಿಯಲ್ಲಿ ಆಡಿದ್ದ 455 ಇನ್ನಿಂಗ್ಸ್‌ಗಳಲ್ಲಿ 110 ಅರ್ಧಶತಕ ಬಾರಿಸಿದ್ದರು. ಆದರೆ ವಾರ್ನರ್ 372 ಇನ್ನಿಂಗ್ಸ್‌ಗಳಲ್ಲಿ 110 ಅರ್ಧಶತಕ ಪೂರೈಸುವ ಮೂಲ, ಗೇಲ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅಂತಿಮವಾಗಿ ತಮ್ಮ ಇನ್ನಿಂಗ್ಸ್ನಲ್ಲಿ 35 ಎಸೆತಗಳನ್ನು ಎದುರಿಸಿದ ವಾರ್ನರ್ 148.57 ಸ್ಟ್ರೈಕ್ ರೇಟ್‌ನಲ್ಲಿ 52 ರನ್ ಕಲೆಹಾಕಿದರು. ಈ ವೇಳೆ ಅವರು 5 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿದರು. ಇದು ಐಪಿಎಲ್ ವೃತ್ತಿ ಜೀವನದಲ್ಲಿ ವಾರ್ನರ್ ಅವರ 62ನೇ ಅರ್ಧಶತಕವಾಗಿದೆ.




