AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಸ್ಟಾರ್ ಆಟಗಾರನಿಗೆ ಇದುವೇ ಕೊನೆಯ ಐಪಿಎಲ್​

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ IPL 2024 ಶುರುವಾಗಲಿದೆ.

TV9 Web
| Edited By: |

Updated on: Mar 10, 2024 | 1:23 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರನ ನಿವೃತ್ತಿ ಸುದ್ದಿ ಎಂಬುದೇ ಅಚ್ಚರಿ. ಅಂದರೆ ಈ ಬಾರಿಯ ಐಪಿಎಲ್​​ ಮೂಲಕ ಆರ್​ಸಿಬಿ ಆಟಗಾರ ನಿವೃತ್ತಿ ಘೋಷಿಸಲಿದ್ದಾರೆ.

1 / 8
ಕೆಲ ದಿನಗಳ ಹಿಂದೆ ಈ ಬಾರಿಯ ಐಪಿಎಲ್ ಮೂಲಕ ಆರ್​ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ಸುದ್ದಿಯಾಗಿತ್ತು. ಇದೀಗ ಡಿಕೆಯ ನಿವೃತ್ತಿ ವಿಚಾರವನ್ನು ಆರ್​ಸಿಬಿ ತಂಡದ ಮೂಲಗಳೇ ಖಚಿತಪಡಿಸಿದೆ.

2 / 8
ಆರ್​ಸಿಬಿ ತಂಡದ ಮೂಲಗಳ ಮಾಹಿತಿ ಪ್ರಕಾರ, ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್​ನೊಂದಿಗೆ ವಿದಾಯ ಹೇಳುವುದು ಖಚಿತ. ಅಂದರೆ ಆರ್​ಸಿಬಿ ಈ ಸೀಸನ್​ನಲ್ಲಿ ಆಡುವ ಕೊನೆಯ ಪಂದ್ಯವೇ ಡಿಕೆ ಅವರ ಅಂತಿಮ ಐಪಿಎಲ್ ಪಂದ್ಯವಾಗಿರಲಿದೆ ಎಂದು ತಿಳಿಸಿದ್ದಾರೆ.

3 / 8
17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದರಲ್ಲೂ ಆರ್​ಸಿಬಿ ಪರ ಟ್ರೋಫಿ ಗೆಲ್ಲುವ ಆಸೆ ಹೊಂದಿದ್ದ ಡಿಕೆ ಅವರ ಕನಸು ಕನಸಾಗಿಯೇ ಉಳಿದಿದೆ.

4 / 8
2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.

5 / 8
2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.

6 / 8
2016-17 ರಲ್ಲಿ ಗುಜರಾತ್ ಲಯನ್ಸ್ (ಈ ತಂಡ ಈಗಿಲ್ಲ) ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.

7 / 8
ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 	4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

8 / 8
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು