IPL 2024: RCB ಸ್ಟಾರ್ ಆಟಗಾರನಿಗೆ ಇದುವೇ ಕೊನೆಯ ಐಪಿಎಲ್​

Edited By:

Updated on: Mar 10, 2024 | 1:23 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ IPL 2024 ಶುರುವಾಗಲಿದೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರನ ನಿವೃತ್ತಿ ಸುದ್ದಿ ಎಂಬುದೇ ಅಚ್ಚರಿ. ಅಂದರೆ ಈ ಬಾರಿಯ ಐಪಿಎಲ್​​ ಮೂಲಕ ಆರ್​ಸಿಬಿ ಆಟಗಾರ ನಿವೃತ್ತಿ ಘೋಷಿಸಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರನ ನಿವೃತ್ತಿ ಸುದ್ದಿ ಎಂಬುದೇ ಅಚ್ಚರಿ. ಅಂದರೆ ಈ ಬಾರಿಯ ಐಪಿಎಲ್​​ ಮೂಲಕ ಆರ್​ಸಿಬಿ ಆಟಗಾರ ನಿವೃತ್ತಿ ಘೋಷಿಸಲಿದ್ದಾರೆ.

2 / 8

ಕೆಲ ದಿನಗಳ ಹಿಂದೆ ಈ ಬಾರಿಯ ಐಪಿಎಲ್ ಮೂಲಕ ಆರ್​ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಐಪಿಎಲ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ಸುದ್ದಿಯಾಗಿತ್ತು. ಇದೀಗ ಡಿಕೆಯ ನಿವೃತ್ತಿ ವಿಚಾರವನ್ನು ಆರ್​ಸಿಬಿ ತಂಡದ ಮೂಲಗಳೇ ಖಚಿತಪಡಿಸಿದೆ.

3 / 8

ಆರ್​ಸಿಬಿ ತಂಡದ ಮೂಲಗಳ ಮಾಹಿತಿ ಪ್ರಕಾರ, ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್​ನೊಂದಿಗೆ ವಿದಾಯ ಹೇಳುವುದು ಖಚಿತ. ಅಂದರೆ ಆರ್​ಸಿಬಿ ಈ ಸೀಸನ್​ನಲ್ಲಿ ಆಡುವ ಕೊನೆಯ ಪಂದ್ಯವೇ ಡಿಕೆ ಅವರ ಅಂತಿಮ ಐಪಿಎಲ್ ಪಂದ್ಯವಾಗಿರಲಿದೆ ಎಂದು ತಿಳಿಸಿದ್ದಾರೆ.

4 / 8

17 ವರ್ಷಗಳ ಐಪಿಎಲ್​ ಕೆರಿಯರ್​ನಲ್ಲಿ ದಿನೇಶ್ ಕಾರ್ತಿಕ್ ಒಟ್ಟು 6 ತಂಡಗಳ ಪರ ಕಣಕ್ಕಿಳಿದಿದ್ದಾರೆ. ಈ ವೇಳೆ 2013 ರಲ್ಲಿ ಮುಂಬೈ ಇಂಡಿಯನ್ಸ್ ಪರ ಅವರು ಟ್ರೋಫಿ ಗೆದ್ದಿದ್ದರು. ಇದಾದ ಬಳಿಕ ಹಲವು ತಂಡಗಳ ಪರ ಆಡಿದರೂ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅದರಲ್ಲೂ ಆರ್​ಸಿಬಿ ಪರ ಟ್ರೋಫಿ ಗೆಲ್ಲುವ ಆಸೆ ಹೊಂದಿದ್ದ ಡಿಕೆ ಅವರ ಕನಸು ಕನಸಾಗಿಯೇ ಉಳಿದಿದೆ.

5 / 8

2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.

6 / 8

2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.

7 / 8

2016-17 ರಲ್ಲಿ ಗುಜರಾತ್ ಲಯನ್ಸ್ (ಈ ತಂಡ ಈಗಿಲ್ಲ) ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.

8 / 8

ಐಪಿಎಲ್​ನಲ್ಲಿ ಒಟ್ಟು 257 ಪಂದ್ಯಗಳನ್ನಾಡಿರುವ ದಿನೇಶ್ ಕಾರ್ತಿಕ್ 22 ಅರ್ಧಶತಕಗಳೊಂದಿಗೆ ಒಟ್ಟು 4842 ರನ್ ಕಲೆಹಾಕಿದ್ದಾರೆ. ಈ ವೇಳೆ 97 ರನ್ ಬಾರಿಸಿದ್ದು ಅವರ ಗರಿಷ್ಠ ಸ್ಕೋರ್. ಇದಲ್ಲದೆ ಧೋನಿ ಬಳಿಕ ಅತೀ ಹೆಚ್ಚು ಪಂದ್ಯವಾಡಿದ ವಿಕೆಟ್ ಕೀಪರ್ ಎಂಬ ದಾಖಲೆ ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ. ಈ ಎಲ್ಲಾ ದಾಖಲೆಗಳೊಂದಿಗೆ ಇದೀಗ ಡಿಕೆ ಐಪಿಎಲ್​ಗೆ ವಿದಾಯ ಹೇಳಿದ್ದಾರೆ.

TV9 Web

TV9 Kannada

Read More
Loading...
Unable to load recommendations.
Follow Us