- Kannada News Photo gallery Cricket photos IPL 2024 faf du plessis, rajat patidar, dinesh karthik smashed fifty vs mumbai
IPL 2024: 61, 50, 53; ಮುಂಬೈ ವಿರುದ್ಧ ಅಬ್ಬರಿಸಿದ ಆರ್ಸಿಬಿ ಬ್ಯಾಟರ್ಸ್..!
IPL 2024: ಈ ಪಂದ್ಯದಲ್ಲಿ ಆರ್ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.
Updated on: Apr 11, 2024 | 9:52 PM

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಮುಂಬೈ ಹಾಗೂ ಆರ್ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿದೆ.

ಈ ಮೂಲಕ ಮುಂಬೈಗೆ 197 ರನ್ಗಳ ಟಾರ್ಗೆಟ್ ನೀಡಿದೆ. ಈ ಪಂದ್ಯದಲ್ಲಿ ಆರ್ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಸೇರಿದಂತೆ ಮೂವರು ಬ್ಯಾಟರ್ಸ್ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದಲ್ಲದೆ ಅರ್ಧಶತಕದ ಇನ್ನಿಂಗ್ಸ್ ಕೂಡ ಆಡಿದರು. ಹೀಗಾಗಿಯೇ ಆರ್ಸಿಬಿ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಮೊದಲು ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಫಾಫ್ ಡುಪ್ಲೆಸಿಸ್ ಕೇವಲ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಇವರಲ್ಲದೆ ನಾಯಕ ಫಾಫ್ ಡುಪ್ಲೆಸಿಸ್ ಜೊತೆ ಅರ್ಧಶತಕದ ಜೊತೆಯಾಟ ನಡೆಸಿದ್ದ ರಜತ್ ಪಾಟಿದರ್ ಕೂಡ ಅರ್ಧಶತಕ ಸಿಡಿಸಿ ಮಿಂಚಿದರು. ಪಾಟಿದರ್ ಕೇವಲ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಕೊನೆಯಲ್ಲಿ ಆರ್ಸಿಬಿ ಪರ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಆರ್ಸಿಬಿ ಆಪತ್ಭಾಂಧವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿದರು.

ಇನ್ನು ಮುಂಬೈ ಪರ ಬೌಲಿಂಗ್ನಲ್ಲಿ ಮಿಂಚಿದ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 5 ವಿಕೆಟ್ ಕಬಳಿಸಿದರು. ತಮ್ಮ ಖೋಟಾದ 4 ಓವರ್ ಬೌಲ್ ಮಾಡಿದ ಬುಮ್ರಾ ಕೇವಲ 21 ರನ್ ನೀಡಿ 5 ವಿಕೆಟ್ ಉರುಳಿಸಿದರು.




