IPL 2024: ಕ್ರೀಡಾಂಗಣದಲ್ಲಿ ಹಾರ್ದಿಕ್ರನ್ನು ನಿಂದಿಸಿದರೆ ಕಠಿಣ ಕ್ರಮ! ಎಂಸಿಎ ಎಚ್ಚರಿಕೆ
IPL 2024: ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅದರಂತೆ ಟ್ರೋಲ್ ಮಾಡುವವರನ್ನು ಹಾಗೂ ನಿಂದಿಸುವವರನ್ನು ಮೈದಾನದಿಂದ ಹೊರಹಾಕಲು ತೀರ್ಮಾನಿಸಿದೆ.
1 / 8
ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ ದಿನದಿಂದಲೂ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಂದಲ್ಲ ಒಂದು ರೀತಿಯಲ್ಲಿ ಭಾರಿ ನಿಂದನೆಗೆ ಒಳಗಾಗುತ್ತಿದ್ದಾರೆ. ಮೊದಲು ರೋಹಿತ್ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ ನಿಂದನೆಗೆ ಒಳಗಾಗಿದ್ದ ಪಾಂಡ್ಯ ಆ ಬಳಿಕ ತಂಡದ ಸತತ ಸೋಲಿನೊಂದಿಗೆ ಟ್ರೋಲಿಗರಿಗೆ ಆಹಾರವಾಗಿದ್ದರು.
2 / 8
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ. ಈ ವೇಳೆ ಹಾರ್ದಿಕ್ ಪಾಂಡ್ಯರ ನಾಯಕತ್ವದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಅಲ್ಲದೆ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳು ಹಾರ್ದಿಕ್ರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅದರ ವಿಡಿಯೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದವು.
3 / 8
ಇದೀಗ ಕ್ರೀಡಾಂಗಣದಲ್ಲಿ ಹಾರ್ದಿಕ್ರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತನ್ನ ತವರು ನೆಲವಾದ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.
4 / 8
ಈ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅದರಂತೆ ಟ್ರೋಲ್ ಮಾಡುವವರನ್ನು ಹಾಗೂ ನಿಂದಿಸುವವರನ್ನು ಮೈದಾನದಿಂದ ಹೊರಹಾಕಲು ತೀರ್ಮಾನಿಸಿದೆ.
5 / 8
ಲೋಕಮಾತ್ ಮರಾಠಿ ವರದಿಯ ಪ್ರಕಾರ, ಹಾರ್ದಿಕ್ ವಿರುದ್ಧ ಈ ರೀತಿಯ ಕೃತ್ಯ ಎಸಗುವವರನ್ನು ಪತ್ತೆ ಹಚ್ಚುವ ಸಲುವಾಗಿ ಎಂಸಿಎ ಭದ್ರತೆಯನ್ನು ಹೆಚ್ಚಿಸಿದೆ ಮತ್ತು ಪಂದ್ಯದ ಸಮಯದಲ್ಲಿ ವೀಕ್ಷಕರ ಮೇಲೆ ಕಟ್ಟುನಿಟ್ಟಾದ ನಿಗಾ ಇರಿಸಲಾಗುತ್ತದೆ.
6 / 8
ಪಂದ್ಯದ ವೇಳೆ ಹಾರ್ದಿಕ್ ವಿರುದ್ಧ ಕಾಮೆಂಟ್ ಮಾಡುವ ಅಥವಾ ಘೋಷಣೆಗಳನ್ನು ಕೂಗುವ ಯಾವುದೇ ಪ್ರೇಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ಅವರನ್ನು ಕ್ರೀಡಾಂಗಣದಿಂದ ಹೊರಹಾಕಲಾಗುತ್ತದೆ ಎಂದು ವರದಿಯಾಗಿದೆ.
7 / 8
ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ಪ್ರದರ್ಶನವು ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ತಂಡ ಸೋತಿದೆ. ಲೀಗ್‌ನ 5ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿತು. ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 31 ರನ್ ಗಳಿಂದ ಸೋತಿತ್ತು.
8 / 8
ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ಅವರ ಈವರೆಗಿನ ಪ್ರದರ್ಶನವು ವಿಶೇಷವೇನಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ಹಾರ್ದಿಕ್ 11 ರನ್ ಗಳಿಸಿದ್ದರು. ಅಲ್ಲದೆ 3 ಓವರ್ ಗಳಲ್ಲಿ 30 ರನ್ ನೀಡಿ ಯಾವುದೇ ವಿಕೆಟ್ ಪಡೆಯಲಿಲ್ಲ. ಹಾಗೆಯೇ ಎಸ್ಆರ್ಹೆಚ್ ವಿರುದ್ಧವೂ ನಿದಾನಗತಿಯ ಬ್ಯಾಟಿಂಗ್ ಮಾಡಿ ತಂಡದ ಸೋಲಿಗೆ ಪ್ರಮುಖ ಕಾರಣರಾಗಿದ್ದರು.