IPL 2024 Final KKR vs SRH: ಮಳೆ ಬರುವ ಸಾಧ್ಯತೆ: ಮೀಸಲು ದಿನದಾಟದ ನಿಯಮಗಳೇನು?

IPL 2024 Final KKR vs SRH: ಐಪಿಎಲ್​ನ ಅಂತಿಮ ಹಣಾಹಣಿಯಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನಲ್ಲಿ ಜರುಗಲಿರುವ ಈ ಮ್ಯಾಚ್​ ವೇಳೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದಾಗ್ಯೂ ಪಂದ್ಯ ಮುಂದುವರೆಯಬಹುದು. ಒಂದು ವೇಳೆ ಮಳೆಯಿಂದಾಗಿ ಇಂದು ಮ್ಯಾಚ್ ಕ್ಯಾನ್ಸಲ್ ಆದರೆ, ನಾಳೆ ಪಂದ್ಯ ನಡೆಯಲಿದೆ.

|

Updated on: May 26, 2024 | 10:22 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

1 / 10
ಭಾನುವಾರ (ಮೇ 26) ನಡೆಯಲಿರುವ ಈ ಪಂದ್ಯದ ವೇಳೆ ಸಣ್ಣ ಪ್ರಮಾಣದಲ್ಲಿ  ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯುಂಟಾದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ...

2 / 10
ಫೈನಲ್ ಪಂದ್ಯದ ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಅದರಂತೆ 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

3 / 10
ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ ಎಂಟು ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ.

4 / 10
ಫೈನಲ್ ಪಂದ್ಯಕ್ಕೆ ಹೆಚ್ಚುವರಿ 120 ನಿಮಿಷಗಳನ್ನು ನಿಗದಿ ಮಾಡಲಾಗಿದೆ. ಅಂದರೆ ಐಪಿಎಲ್​ ಪಂದ್ಯದ ನಿಗದಿತ ಸಮಯ 3 ಗಂಟೆ 15 ನಿಮಿಷಗಳು. ಒಂದು ವೇಳೆ ಮಳೆ ಬಂದು ಅಥವಾ ಇನ್ನಿತರ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಯನ್ನು ಬಳಸಲಾಗುತ್ತದೆ. ಅಂದರೆ ಫೈನಲ್ ಪಂದ್ಯಕ್ಕೆ 7.30 ರಿಂದ 1 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

5 / 10
ಇದಾಗ್ಯೂ ಪಂದ್ಯ ನಡೆಯದಿದ್ದರೆ ಅಥವಾ ಪೂರ್ಣಗೊಳ್ಳದಿದ್ದರೆ ಮ್ಯಾಚ್ ಅನ್ನು ಮೀಸಲು ದಿನದಾಟವನ್ನು ಬಳಸಲಾಗುತ್ತದೆ. ಮೀಸಲು ದಿನದಾಟದಲ್ಲಿ ಆರಂಭದಿಂದಲೇ ಪಂದ್ಯವನ್ನು ಆಡಲಾಗುತ್ತದೆ. ಅಂದರೆ ನಿಗದಿತ ದಿನದಲ್ಲಿ ಅರ್ಧ ಪಂದ್ಯ ನಡೆದಿದ್ದರೆ ಮೀಸಲು ದಿನದಾಟದಲ್ಲಿ ಮುಂದುವರೆಸಲಾಗುವುದಿಲ್ಲ. ಬದಲಾಗಿ ಹೊಸದಾಗಿ ಮೊದಲಿಂದಲೇ ಪಂದ್ಯವನ್ನು ಆರಂಭಿಸಲಾಗುತ್ತದೆ.

6 / 10
ಮೀಸಲು ದಿನದಾಟದಲ್ಲೂ ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಬಹುದು. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಬಹುದು, ಅಲ್ಲದೆ 12.56 ರೊಳಗೆ ಮುಗಿಸುವ ಪರಿಸ್ಥಿತಿ ಇದೆಯಾ ಎಂಬುದನ್ನು ರೆಫರಿ ಅವಲೋಕಿಸಲಿದ್ದಾರೆ.

7 / 10
ಇನ್ನು 11.56 ರಿಂದ 12.56 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಸೂಪರ್ ಓವರ್ ಆಡಿಸಲಾಗುತ್ತದೆ. ಅಂದರೆ ಮೀಸಲು ದಿನದಾಟದಲ್ಲಿ ಪಂದ್ಯ ನಡೆಯದಿದ್ದರೆ ಸೂಪರ್ ಓವರ್ ಫೈನಲ್ ಮ್ಯಾಚ್ ನಡೆಯಲಿದೆ.

8 / 10
ಒಂದು ವೇಳೆ ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ಕೂಡ ನಡೆಯದಿದ್ದರೆ ಮಾತ್ರ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

9 / 10
ಅದರಂತೆ ಫೈನಲ್ ಪಂದ್ಯವು ಮಳೆಗೆ ಅಹುತಿಯಾದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿ ಬರಬಹುದು.

10 / 10
Follow us
ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ಘೋಷಿಸಿದ ಆ್ಯಪಲ್

ಆಹಾರ ಹೇಗೆ ಸೇವನೆ ಮಾಡಬೇಕು, ಪದ್ಧತಿ ಹೇಗಿರಬೇಕು? ಈ ವಿಡಿಯೋ ನೋಡಿ

ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ

ಹೊಸಕೋಟೆಯ ನಳಪಾಕ ಹೋಟೆಲ್​​ ಗೋಬಿಯಲ್ಲಿ ಹುಳ ಪತ್ತೆ: ಮುಂದೇನಾಯ್ತು ನೋಡಿ

ಜವಾಬ್ದಾರಿವಹಿಸಿಕೊಂಡವರ  ಪ್ರಮಾದಗಳಿಂದ ಪಕ್ಷಕ್ಕೆ ಹಿನ್ನಡೆಯಾಯಿತು: ಯತ್ನಾಳ್

ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಕಸ್ಟಡಿ, ಪುನಃ ಸೆಂಟ್ರಲ್ ಜೈಲ

ದೇಶ ನಮ್ಮದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್: ಜಮೀರ್ ಅಹ್ಮದ್

ಬೇರೆಯವರ ಮೇಲೆ ಗೂಬೆಕೂರಿಸುವುದು ದೇವೇಗೌಡ ಕುಟುಂಬದ ಅಭ್ಯಾಸ: ಡಿಕೆ ಸುರೇಶ್

ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ

ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್