IPL 2024: ಈ ಸಲ RCB ಕಪ್ ಗೆದ್ದೇ ಗೆಲ್ಲುತ್ತೆ ಎಂದ ವಿಜಯ ಮಲ್ಯ..!

|

Updated on: May 22, 2024 | 10:37 AM

IPL 2024 RR vs RCB: ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಮೇ22) ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

1 / 6
IPL 2024: ಐಪಿಎಲ್​ನ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಮಾಲೀಕ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ. ಈ ಶುಭಕೋರುವಿಕೆಯೊಂದಿಗೆ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

2 / 6
ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿಜಯ ಮಲ್ಯ, ನಾನು ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಬಿಡ್ ಮಾಡಿದಾಗ ಮತ್ತು ವಿರಾಟ್ ಕೊಹ್ಲಿಗಾಗಿ ಬಿಡ್ ಮಾಡಿದಾಗ, ಇದಕ್ಕಿಂತ ಉತ್ತಮ ಆಯ್ಕೆಗಳಿಲ್ಲ ಎಂದು ನನ್ನ ಒಳ ಮನಸ್ಸು ಹೇಳುತ್ತಿತ್ತು. ಇದೀಗ ಆರ್​ಸಿಬಿ ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳ್ತಿದೆ. ಯಾವುದೇ ಚಿಂತೆಯಿಲ್ಲದೆ ಮುನ್ನುಗ್ಗಿ...ಬೆಸ್ಟ್ ಆಫ್ ಲಕ್ ಎಂದು ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ.

3 / 6
ಇದಕ್ಕೂ ಮುನ್ನ ಸಿಎಸ್​ಕೆ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದಾಗ ವಿಜಯ ಮಲ್ಯ ಅಭಿನಂದನೆ ಸಲ್ಲಿಸಿದ್ದರು. ಪ್ಲೇಆಫ್​ಗೆ ಅರ್ಹತೆ ಪಡೆದಿದ್ದಕ್ಕಾಗಿ ಆರ್​ಸಿಬಿಗೆ ಅಭಿನಂದನೆಗಳು. ನಿರಾಶಾದಾಯಕ ಆರಂಭದ ಹೊರತಾಗಿಯೂ ಸತತ ಗೆಲುವುಗಳ ಮೂಲಕ ಈ ಹಂತಕ್ಕೇರಿದೆ. ಇದೇ ಹಾದಿಯಲ್ಲಿ ಮುನ್ನುಗ್ಗಿ ಟ್ರೋಫಿ ಗೆಲ್ಲುವುದೊಂದೇ ಬಾಕಿ ಎಂದು ಎಕ್ಸ್​​ನಲ್ಲಿ ಆರ್​ಸಿಬಿ ತಂಡದ ಮಾಜಿ ಮಾಲೀಕ ಬರೆದುಕೊಂಡಿದ್ದರು.

4 / 6
ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದು, ಈ ಮೂಲಕ ಈ ಸಲ ರಾಯಲ್ ಚಾಲೆಂಜರ್ಸ್ ಹುಡುಗರು ಟ್ರೋಫಿ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

5 / 6
ಅಂದಹಾಗೆ ವಿಜಯ್ ಮಲ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು ಬರೋಬ್ಬರಿ 455 ಕೋಟಿ ರೂ. ನೀಡಿ ಖರೀದಿಸಿದ್ದರು.

6 / 6
ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

Published On - 10:30 am, Wed, 22 May 24