IPL 2024: ಎಂಎಸ್ ಧೋನಿ ನಾಯಕತ್ವದ ಬಗ್ಗೆ ಗಂಭೀರ್ ಗಂಭೀರ ಹೇಳಿಕೆ
IPL 2024: ಐಪಿಎಲ್ 2024 ರ 22 ನೇ ಪಂದ್ಯ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್, ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
Updated on: Apr 08, 2024 | 5:21 PM

ಐಪಿಎಲ್ 2024 ರ 22 ನೇ ಪಂದ್ಯ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್ ಮೆಂಟರ್ ಗೌತಮ್ ಗಂಭೀರ್, ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ವಾಸ್ತವವಾಗಿ ಧೋನಿ ವಿಚಾರ ಬಂದಾಗಲೆಲ್ಲ ಸಿಡಿಮಿಡಿಗೊಳ್ಳುವ ಗಂಭೀರ್, ಈ ಭಾರಿ ಮಾತ್ರ ಕ್ಯಾಪ್ಟನ್ ಕೂಲ್ ಅನ್ನು ಹೊಗಳಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ ಮೂರು ಬಾರಿ ಐಸಿಸಿ ಪ್ರಶಸ್ತಿಯನ್ನು ಗೆದ್ದಿದ್ದು, ವಿಶ್ವದ ಯಶಸ್ವಿ ನಾಯಕರಲ್ಲಿ ಧೋನಿ ಕೂಡ ಒಬ್ಬರು ಎಂದು ಗಂಭೀರ್ ಹೇಳಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಭಾರತ ಕಂಡ ಅತ್ಯಂತ ಯಶಸ್ವಿ ನಾಯಕ, ಯಾರೂ ಆ ಮಟ್ಟವನ್ನು ತಲುಪಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಅವರು ಮೂರು ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ವಿದೇಶಗಳಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ.

ಐಪಿಎಲ್‌ನಲ್ಲೂ ಅವರು ಅಮೋಘ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಅವರು 6 ಮತ್ತು 7 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಆಟವನ್ನು ಮುಗಿಸಲು ಪ್ರಯತ್ನಿಸುತ್ತಾರೆ. ಅವರು ಮೈದಾನದಲ್ಲಿ ತುಂಬಾ ಶಾಂತವಾಗಿರುತ್ತಾರೆ. ಸಿಎಸ್ಕೆ ಪರ ನೀವು ಗೆಲುವಿನ ರನ್ ಬಾರಿಸುವ ತನಕ ಗೆಲುವು ನಿಮ್ಮದು ಎಂದು ಭಾವಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಐಪಿಎಲ್ 17 ನೇ ಸೀಸನ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಆಟದ ಬಗ್ಗೆ ಹೇಳುವುದಾದರೆ.. ಧೋನಿಗೆ ಇಲ್ಲಿಯವರೆಗೆ 2 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿದೆ. ಧೋನಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 16 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 37* ರನ್ ಹಾಗೂ ಹೈದರಾಬಾದ್ ವಿರುದ್ಧದ ಕೊನೆಯ ಪಂದ್ಯದಲ್ಲಿ 3 ಎಸೆತಗಳಲ್ಲಿ 1* ರನ್ ಬಾರಿಸಿದ್ದರು.

ಇಂದಿನ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ಹಾಗೂ ಸಿಎಸ್ಕೆ ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳ ಈ ಹಿಂದಿನ ದಾಖಲೆಯನ್ನು ನೋಡುವುದಾದರೆ.. ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 28 ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಚೆನ್ನೈ 18 ಪಂದ್ಯಗಳನ್ನು ಗೆದ್ದಿದ್ದರೆ, ಕೋಲ್ಕತ್ತಾ 9 ಪಂದ್ಯಗಳನ್ನು ಗೆದ್ದಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.




